
Kubera Movie Teaser: ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ ಮಂದಣ್ಣ; ಗ್ಲಾಮರ್ ಮಾಯ!
ನಟಿ ರಶ್ಮಿಕಾ ಮಂದಣ್ಣ ನಟಿಸಿರುವ ತಮಿಳಿನ 'ಕುಬೇರ' ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಡಿ-ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಧನುಷ್ ಮತ್ತು ನಾಗಾರ್ಜುನ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಣ ಮತ್ತು ಶ್ರೀಮಂತ ವ್ಯಕ್ತಿಯ ಕಥೆಯನ್ನ ಕುಬೇರ ಸಿನಿಮಾ ಹೇಳುತ್ತಿದೆ.
ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ. ಬೆಂಗಳೂರು ಕನ್ನಡ, ಹವ್ಯಕ ಕನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಶೈಲಿಯ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡ ಬಳಕೆ ಈ ಸಿನಿಮಾದಲ್ಲಿದೆ. ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಪ್ರತಿಭಾವಂತ ಚೈತ್ರಾ ಜೆ ಆಚಾರ್.. ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬಬಲ್ಲ ಟ್ಯಾಲೆಂಟೆಡ್ ಹೀರೋಯಿನ್ ಚೈತ್ರಾ ಜೆ ಆಚಾರ್ ಈಗ ಮಾರ್ನಮಿ ಅನ್ನೋ ಸಿನಿಮಾ ಮಾಡುತ್ತಿದ್ದಾರೆ. ಕರಾವಳಿ ಭಾಗದ ಪ್ರೇಮಕಥೆಯುಳ್ಳ ಮಾರ್ನಮಿ ಸಿನಿಮಾದಲ್ಲಿ ಚೈತ್ರಾ ಜೆ ಆಚಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚೈತ್ರಾ ಪಾತ್ರ ಪರಿಚಯದ ಟೀಸರ್ ಬಿಡುಗಡೆ ಆಗಿದೆ. ಜೀ ಕನ್ನಡ ವಾಹಿನಿಯ ಹಿಟ್ ಧಾರವಾಹಿ ಸೀತಾರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.ಇನ್ನೈದು ದಿನದಲ್ಲಿ ಸೀತಾರಾಮ ಧಾರವಾಹಿ ಮುಕ್ತಾಯ ಆಗಲಿದೆ. ಹೀಗಾಗಿ ಐದು ದಿನಕ್ಕೆ ಐದು ತರದ ಕಥೆಗಳು ಸೀತಾರಾಮ ಸೀರಿಯಲ್ನಲ್ಲಿ ಪ್ರಸಾರ ಆಗಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ