India@75: ಹರ್ ಘರ್ ತಿರಂಗಾ ಅಭಿಯಾನಕ್ಕೆ ತಾರೆಯರ ಸಾಥ್

75ನೇ ಸ್ವಾತಂತ್ರ್ಯೋತ್ಸವದ ಈ ಅಮೃತಮಹೋತ್ಸವ ಘಳಿಗೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

Share this Video
  • FB
  • Linkdin
  • Whatsapp

ದೇಶದಾದ್ಯಂತ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲೆಲ್ಲೂ ಅಜಾದಿ ಸ್ವಾತಂತ್ರ್ಯೋತ್ಸವ ಕಳೆಕಟ್ಟಿದೆ. ಮನೆ ಮನದಲ್ಲೂ ತ್ರಿವರ್ಣ ಧ್ವಜ ಹಾರುತ್ತಿದೆ. ಇದೇ ಸಮಯದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗುತ್ತಿದೆ. 75ನೇ ಸ್ವಾತಂತ್ರ್ಯೋತ್ಸವದ ಈ ಅಮೃತಮಹೋತ್ಸವ ಘಳಿಗೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ಕಲಾವಿದರು ಸಹ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಕಲಾವಿದರು ತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ಸ್ಯಾಂಡಲ್ ವುಡ್ ಸ್ಟಾರ್ಸ್ ಮನೆಮೇಲು ರಾಷ್ಟ್ರಧ್ವಜ ರಾರಾಜಿಸುತ್ತಿದೆ. ಸುದೀಪ್, ಯಶ್, ಜಗ್ಗೇಶ್, ಗಣೇಶ್ ಸೇರಿದಂತೆ ಅನೇಕರ ಮನೆ ಮೇಲೆ ಧ್ವಜ ಹಾರಿದೆ. 

Related Video