RRR; ದೆಹಲಿ ಚಾಂದಿನಿ ಚೌಕ್‌ನಲ್ಲಿ ಜರ್ಮನ್ ರಾಯಭಾರಿಗಳ ನಾಟು ನಾಟು ಡಾನ್ಸ್
ಜರ್ಮನ್ ರಾಯಭಾರಿಗಳು ದೆಹಲಿಯ ಚಾಂದಿನಿ ಚೌಕ್‌ನಲ್ಲಿ ನಾಟು ನಾಟು ಹಾಡಿಗೆ ಮಸ್ತ್ ಡಾನ್ಸ್ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾಟು ನಾಟು...ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲೂ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ಬಳಿಕವಂತೂ ನಾಟು ನಾಟು ಹವಾ ಮತ್ತಷ್ಟು ಜೋರಾಗಿದೆ. ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡು ಅತ್ಯುತ್ತಮ ಮೂಲಗೀತೆ ವಿಭಾಗದಲ್ಲಿ ಆಸ್ಕರ್ ಗೆದ್ದು ಬೀಗಿದೆ. ನಾಟು ನಾಟು ಹಾಡಿಗೆ ಅನೇಕರು ಹೆಜ್ಜೆ ಹಾಕಿ ಸಂಭ್ರಮಿಸುತ್ತಿದ್ದಾರೆ. ಇದೀಗ ದೆಹಲಿಯ ಚಾಂದಿನಿ ಚೌಕ್‌ನಲ್ಲಿ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೌದು ಜರ್ಮನ್ ರಾಯಭಾರಿಗಳು ದೆಹಲಿಯ ಚಾಂದಿನಿ ಚೌಕ್‌ನಲ್ಲಿ ನಾಟು ನಾಟು ಹಾಡಿಗೆ ಮಸ್ತ್ ಡಾನ್ಸ್ ಮಾಡಿದ್ದಾರೆ. ಈ ವಿಡಿಯೋ ಈಗ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.