ನಾಮ್ ಚೋಟಾ ಹೈ.. ಲೇಕಿನ್ ಸೌಂಡ್ ಬಡಾ ಹೈ: ಪುಷ್ಪ-ದಿ ರೂಲ್ ಟ್ರೇಲರ್​​ಗೆ ಸಖತ್ ರೆಸ್ಪಾನ್ಸ್!

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಸಿನಿರಸಿಕರಿಂದ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಕಾಡಾನೆಯ ಜೋರು ಸೌಂಡು, ಯಾರವನು? ಹಣ ಎಂದರೆ ಲೆಕ್ಕಕ್ಕಿಲ್ಲ. 

First Published Nov 18, 2024, 4:30 PM IST | Last Updated Nov 18, 2024, 4:30 PM IST

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಸಿನಿರಸಿಕರಿಂದ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಕಾಡಾನೆಯ ಜೋರು ಸೌಂಡು, ಯಾರವನು? ಹಣ ಎಂದರೆ ಲೆಕ್ಕಕ್ಕಿಲ್ಲ. ಅಧಿಕಾರ ಅಂದ್ರೆ ಭಯ ಇಲ್ಲ ಎನ್ನುವ ಜಗಪತಿ ಬಾಬು ಡೈಲಾಗ್‌ನೊಂದಿಗೆ ಟ್ರೇಲರ್‌ ಆರಂಭವಾಗುತ್ತದೆ. ಅಲ್ಲಿಂದ ಶುರುವಾಗುವ ಟ್ರೇಲರ್‌ ತನ್ನದೇ ಆದ ದೊಡ್ಡ ಸಾಮ್ರಾಜ್ಯವನ್ನೇ ಸೃಷ್ಟಿಸಿಕೊಂಡ ಪುಷ್ಪರಾಜ್‌ನ ಇನ್ನೊಂದು ಮುಖದ ಅನಾವರಣ ಮಾಡಿದ್ದಾರೆ ನಿರ್ದೇಶಕರು. ಪೊಲೀಸ್‌ ಇಲಾಖೆ ಮಾತ್ರವಲ್ಲದೆ, ರಾಜಕಾರಣಿಗಳಿಗೂ ಈ ಪುಷ್ಪರಾಜ್‌ ನಡುಕ ಹುಟ್ಟಿಸಿದ್ದಾನೆ.  ಅದಕ್ಕೆ ತಕ್ಕಂತೆ, ನಾಮ್ ಚೋಟಾ ಹೈ.. ಲೇಕಿನ್ ಸೌಂಡ್ ಬಡಾ ಹೈ ಎಂದು ಪುಷ್ಪರಾಜ್‌ ಹೇಳುವ ಎಲಿವೇಶನ್ ದೃಶ್ಯಗಳೂ ಟ್ರೇಲರ್‌ನಲ್ಲಿವೆ. ಇದೆಲ್ಲದರ ಜತೆಗೆ ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಜತೆಗಿನ ದೃಶ್ಯಗಳು ಟ್ರೇಲರ್‌ನಲ್ಲಿವೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.