Asianet Suvarna News Asianet Suvarna News

Jacqueline Fernandez Detained: ಸಾವಿರಾರು ಕೋಟಿ ವಂಚಕನ ಜೊತೆ ಸಿಕ್ಕಾಪಟ್ಟೆ ಕ್ಲೋಸ್, ಜಾಕಿಗಿದು ಬೇಕಿತ್ತಾ ?

Dec 7, 2021, 3:03 PM IST
  • facebook-logo
  • twitter-logo
  • whatsapp-logo

ದುಬಾರಿ ಉಡುಗೊರೆಗಳ ಆಸೆಗೆ ಬಿದ್ದು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಆರೋಪಿ ಸುಕೇಶ್ ಚಂದ್ರಶೇಖರ್ ಹಾಗೂ ಅತನ ಪತ್ನಿ ಲೀನಾ ಮರಿಯಾ ಪೌಲ್ ಹಾಗೂ ಇನ್ನೂ ಆರು ಮಂದಿಯ ವಿರುದ್ಧ ಬರೋಬ್ಬರಿ 7 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 200 ಕೋಟಿ ಹಣ ವಂಚನೆ ಕೇಸ್‌ನಲ್ಲಿ ಇವರೆಲ್ಲರ ವಿರುದ್ಧ ಕೇಸ್ ದಾಖಲಾಗಿದೆ. ಚಾರ್ಜ್‌ಶೀಟ್ ಪ್ರಕಾರ ಆರೋಪಿ ಸುಕೇಶ್ ತಾನು ಜಾಕ್ವೆಲಿನ್‌ಗೆ ಕೊಟ್ಟ ದುಬಾರಿ ಉಡುಗೊರೆಗಳ ಕುರಿತು ಸೀಕ್ರೆಟ್ ರಿವೀಲ್ ಮಾಡಿದ್ದಾನೆ.

ವಿದೇಶಕ್ಕೆ ಹಾರಲಿದ್ದ ನಟಿಗೆ ಏರ್ಪೋರ್ಟ್‌ನಲ್ಲಿ ತಡೆ, ದೆಹಲಿಯಲ್ಲಿ ವಿಚಾರಣೆ

ಶ್ರೀಲಂಕಾ ಸುಂದರಿ ಬಾಲಿವುಡ್‌ನ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ 52 ಲಕ್ಷ ರುಪಾಯಿಯ ಕುದುರೆ ಹಾಗೂ 9 ಲಕ್ಷ ರೂಪಾಯಿಯ ಪರ್ಷಿಯನ್ ಬೆಕ್ಕು ಉಡುಗೊರೆಯಾಗಿ ನೀಡಿರುವುದಾಗಿ ಹೇಳಿದ್ದಾನೆ. ಚಾರ್ಜ್‌ಶೀಟ್‌ನಲ್ಲಿ ನಟಿ ಹಾಗೂ ಡ್ಯಾನ್ಸರ್ ನೋರಾ ಫತೇಹಿ ಅವರ ಹೆಸರನ್ನೂ ನಮೂದಿಸಲಾಗಿದೆ. ನಟಿಗೆ ಸುಕೇಶ್ ಚಂದ್ರಶೇಖರ್ ದುಬಾರಿ ಕಾರು ಉಡುಗೊರೆಯಾಗಿ ನೀಡಿರುವುದಾಗಿ ಹೇಳಿದ್ದಾರೆ.

Video Top Stories