Vikram Movie: ಪುನೀತ್ ಇದ್ದಿದ್ದರೆ ಅವರ ಜೊತೆ ಸಿನಿಮಾ ಮಾಡುತ್ತಿದ್ದೆ: ಕಮಲ್ ಹಾಸನ್

ಕಮಲ್​ ಹಾಸನ್ ನಟನೆಯ 'ವಿಕ್ರಮ್' ಸಿನಿಮಾ ಜೂನ್​ 3ರಂದು ತೆರೆಗೆ ಬರುತ್ತಿದೆ. ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಅವರು ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರು ಭರ್ಜರಿಯಾಗಿ ಸಿನಿಮಾ ಪ್ರಚಾರ ಮಾಡಿದ್ದಾರೆ. ಕಮಲ್ ಹಾಸನ್ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. 

Share this Video
  • FB
  • Linkdin
  • Whatsapp

ಕಮಲ್​ ಹಾಸನ್ ನಟನೆಯ 'ವಿಕ್ರಮ್' ಸಿನಿಮಾ ಜೂನ್​ 3ರಂದು ತೆರೆಗೆ ಬರುತ್ತಿದೆ. ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು ಅವರು ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರು ಭರ್ಜರಿಯಾಗಿ ಸಿನಿಮಾ ಪ್ರಚಾರ ಮಾಡಿದ್ದಾರೆ. ಕಮಲ್ ಹಾಸನ್ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಹೀಗಾಗಿ ಕನ್ನಡದ ಸ್ಟಾರ್ಸ್ ಜತೆ ಮತ್ತು ಬೆಂಗಳೂರಿನ ಜತೆ ಒಳ್ಳೆಯ ನಂಟಿದೆ. ಇಂದು ಬೆಂಗಳೂರಿಗೆ ಆಗಮಿಸಿದ ವೇಳೆ ಸಿನಿಮಾ ಬಗ್ಗೆ ಹೇಳುವುದರ ಜತೆಗೆ ಅವರು ಇಲ್ಲಿನ ನೆನಪು ಹಾಗೂ ರಾಜ್​ಕುಮಾರ್ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ವಿಶೇಷವಾಗಿ ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕುಟುಂಬ ನನ್ನ ಕುಟುಂಬದಂತೆ. ನಾನು ಅವರ ಮನೆಗೆ ಭೇಟಿ ಕೊಟ್ಟಿದ್ದೆ. ಪುನೀತ್ ಇದ್ದಿದ್ದರೆ ಅವರ ಜೊತೆ ಸಿನಿಮಾ ಮಾಡುತ್ತಿದೆ ಎಂದು ಕಮಲ್​ ಹಾಸನ್ ತಿಳಿಸಿದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video