Asianet Suvarna News Asianet Suvarna News

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಇನ್ನು 6 ವರ್ಷ ಸ್ಯಾಂಡಲ್‌ವುಡ್‌ಗೆ ಸಿಗಲ್ಲ

ಸ್ಯಾಂಡಲ್ ವುಡ್‌ನ ಖ್ಯಾತ ನಿರ್ದೇಶಕ, ಕೆಜಿಎಫ್ ನಿರ್ಮಾತೃ ಪ್ರಶಾಂತ್ ನೀಲ್ ಸದ್ಯ ತೆಲುಗು ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ಕೆಜಿಎಫ್-2 ಸಿನಿಮಾದ ಬ್ಲಾಕ್ ಬಸ್ಟರ್ ಸಕ್ಸಸ್ ಬಳಿಕ ಪ್ರಶಾಂತ್ ನೀಲ್ ತೆಲುಗು ಸ್ಟಾರ್ ಪ್ರಭಾಸ್ ಸ್ಟಾರ್ ನಟನೆಯ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಸ್ಯಾಂಡಲ್ ವುಡ್‌ನ ಖ್ಯಾತ ನಿರ್ದೇಶಕ, ಕೆಜಿಎಫ್ ನಿರ್ಮಾತೃ ಪ್ರಶಾಂತ್ ನೀಲ್ ಸದ್ಯ ತೆಲುಗು ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ಕೆಜಿಎಫ್-2 ಸಿನಿಮಾದ ಬ್ಲಾಕ್ ಬಸ್ಟರ್ ಸಕ್ಸಸ್ ಬಳಿಕ ಪ್ರಶಾಂತ್ ನೀಲ್ ತೆಲುಗು ಸ್ಟಾರ್ ಪ್ರಭಾಸ್ ಸ್ಟಾರ್ ನಟನೆಯ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ 35 ರಿಂದ 40 ರಷ್ಟು ಚಿತ್ರೀಕರಣ ಮುಗಿಸಿರುವ ಪ್ರಶಾಂತ್ ನೀಲ್ ಸದ್ಯದಲ್ಲೇ ಸಲಾರ್ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಈ ಸಿನಿಮಾ ಮುಗಿಯುತ್ತಿದ್ದಂತೆ ಪ್ರಶಾಂತ್ ನೀಲ್ ಜೂ ಎನ್ ಟಿ ಆರ್ ಜೊತೆ ಹೊಸ ಸಿನಿಮಾ ಪ್ರಾರಂಭ ಮಾಡಲಿದ್ದಾರೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಮತ್ತೊಂದು ತೆಲುಗು ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಹಾಗಾಗಿ ಪ್ರಶಾಂತ್ ನೀಲ್ ಸದ್ಯಕ್ಕೆ ಸ್ಯಾಂಡಲ್ ವುಡ್ ಕಡೆ ಮುಖ ಮಾಡುವ ಸಾಧ್ಯತೆ ಕಡಿಮೆ ಇದೆ.