ಅಭಿಮಾನಿಗಳಿಗೆ ಕಿಚ್ಚ ಗುಡ್‌ನ್ಯೂಸ್: ಒಟ್ಟೊಟ್ಟಿಗೆ 3 ಸಿನಿಮಾಗೆ ಸಹಿ

ಕಿಚ್ಚ ಸುದೀಪ್ 46ನೇ ಸಿನಿಮಾ ಯಾವುದು? ಸಿನಿಮಾ ಬಗ್ಗೆ ಅಪ್‌ಡೇಟ್ ಬೇಕು ಎಂದು ಕಾದು ಕುಳಿತಿದ್ದ ಫ್ಯಾನ್ಸ್‌ಗೆ ಸುದೀಪ್ ಇದೀಗ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಆ ಗುಡ್ ನ್ಯೂಸ್ ಏನು ಈ ವಿಡಿಯೋ ನೋಡಿ 
 

Share this Video
  • FB
  • Linkdin
  • Whatsapp

ಕಿಚ್ಚ ಸುದೀಪ್ 46ನೇ ಸಿನಿಮಾ ಯಾವುದು? ಸಿನಿಮಾ ಬಗ್ಗೆ ಅಪ್‌ಡೇಟ್ ಬೇಕು ಎಂದು ಕಾದು ಕುಳಿತಿದ್ದ ಫ್ಯಾನ್ಸ್‌ಗೆ ಸುದೀಪ್ ಇದೀಗ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.3 ಚಿತ್ರಗಳನ್ನು ಒಪ್ಪಿಕೊಂಡಿದ್ದೇನೆ ಎನ್ನುವ ಮೂಲಕ ಸುದೀಪ್ ಸಿಹಿಸುದ್ದಿ ನೀಡಿದ್ದಾರೆ.ವಿಕ್ರಾಂತ್ ರೋಣ ಚಿತ್ರದ ರಿಲೀಸ್ ನಂತರ ಬಿಗ್ ಬಾಸ್ ಶೋ, ಸ್ಪೋಟ್ಸ್ ಅಂತಾ ಕಿಚ್ಚ ಬ್ಯುಸಿಯಾಗಿದ್ದು, ಕಿಚ್ಚ ಮುಂದಿನ ಚಿತ್ರ ಬಗ್ಗೆ ಅಭಿಮಾನಿಗಳಿಗೆ ಇದ್ದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಟ್ವೀಟ್‌ ಮಾಡುವ ಮೂಲಕ `ಕಿಚ್ಚ 46′ ಕುರಿತಾಗಿ ನಿಮ್ಮ ಟ್ವೀಟ್‌ಗಳು ಮತ್ತು ಮೀಮ್‌ಗಳು ನನಗೆ ಅರ್ಥವಾಗಿದೆ. ಧನ್ಯವಾದಗಳು. ಈಗ ಇದೇ ವಿಚಾರದ ಕುರಿತಾಗಿ ಈ ಸಣ್ಣ ಸ್ಪಷ್ಟೀಕರಣವನ್ನು ನೀಡಲು ನಿರ್ಧರಿಸಿದ್ದೇನೆ. ನಾನು ವಿರಾಮ ತೆಗೆದುಕೊಂಡಿದ್ದೆ. ವಿಕ್ರಾಂತ್ ರೋಣ ಚಿತ್ರದ ನಂತರ ನನಗೆ ಬ್ರೇಕ್ ಬೇಕಾಗಿತ್ತು. ಸುದೀರ್ಘವಾದ ವೇಳಾಪಟ್ಟಿ ಹೊಂದಿದ್ದ ಬಿಗ್ ಬಾಸ್ `ವಿಕ್ರಾಂತ್ ರೋಣ’ ಚಿತ್ರದಲ್ಲಿ ಭಾಗಿಯಾಗುವುದು ಶ್ರಮದಾಯಕವಾಗಿತ್ತು. ಆದ್ದರಿಂದ ಈ ವಿರಾಮ ನನಗೆ ಅಗತ್ಯವಿತ್ತು. .ಕೆಸಿಸಿಯಲ್ಲಿ ಸಮಯ ಕಳೆದಿದ್ದು ನನಗೆ ಖುಷಿ ನೀಡಿದೆ. ಇದರಿಂದ ನನಗೆ ಖಂಡಿತವಾಗಿಯೂ ಉತ್ತಮ ವಿರಾಮ ಸಿಕ್ತು ಎಂದು ನಾನು ಹೇಳಬಲ್ಲೆ. ಮೂರು ಸ್ಕ್ರಿಪ್ಟ್‌ ಅಂತಿಮಗೊಳಿಸಿದ್ದೇನೆ. ಅಂದರೆ ಮೂರು ಚಿತ್ರಗಳನ್ನು ಅಂತಿಮಗೊಳಿಸಲಾಗಿದೆ. ಆಯಾ ತಂಡಗಳು ಹಗಲಿರುಳು ಶ್ರಮಿಸುತ್ತಿವೆ ಮತ್ತು ಶೀಘ್ರದಲ್ಲೇ ಅಧಿಕೃತವಾಗಿ ಅನೌನ್ಸ್ ಮಾಡ್ತಾರೆ. ಪ್ರೀತಿ ಹಾಗು ಅಪ್ಪುಗೆಗಳೊಂದಿಗೆ ನಿಮ್ಮ ಕಿಚ್ಚ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video