ಹೀರೋಗಳಿಗೆ ಟಕ್ಕರ್ ಕೊಡ್ತಿದ್ದಾಳೆ ಈ ನಟಿ: ಕಿಸ್ ಹುಡುಗಿ ಇಷ್ಟೊಂದು ದುಬಾರಿನಾ?

ಮಾಸ್ ಎಂಟರ್‌ಟೈನರ್ ನಂದಮೂರಿ ಬಾಲಕೃಷ್ಣ ನಟಿಸಿರುವ ಭಗವಂತ ಕೇಸರಿ ಸಿನಿಮಾದಲ್ಲಿ ಅವಕಾಶ ಸಿಕ್ಕ ಬಳಿಕ ನಟಿ ಶ್ರೀಲೀಲಾ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. ಭಗವಂತ ಕೇಸರಿ ಚಿತ್ರದ ಯಶಸ್ಸಿನ ನಂತರ ಶ್ರೀಲೀಲಾ ಸಂಭಾವನೆಯನ್ನು ಹೆಚ್ಚಿಸಿದ್ದಾರೆ. 
 

Share this Video
  • FB
  • Linkdin
  • Whatsapp

ಮಾಸ್ ಎಂಟರ್‌ಟೈನರ್ ನಂದಮೂರಿ ಬಾಲಕೃಷ್ಣ ನಟಿಸಿರುವ ಭಗವಂತ ಕೇಸರಿ ಸಿನಿಮಾದಲ್ಲಿ ಅವಕಾಶ ಸಿಕ್ಕ ಬಳಿಕ ನಟಿ ಶ್ರೀಲೀಲಾ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಮತ್ತು ಶ್ರೀಲೀಲಾ ಇಬ್ಬರು ನಾಯಕಿಯರಾಗಿ ನಟಿಸಿದ್ದಾರೆ. ಪ್ರಸ್ತುತ ಚಿತ್ರರಂಗದ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿರುವ ಶ್ರೀಲೀಲಾ, ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ ಅವರ ಸೊಸೆಯ ಪಾತ್ರವನ್ನು ನಿರ್ವಹಿಸಿದ್ದಾರೆ. ತಮ್ಮ ಅಭಿನಯದಿಂದ ಪ್ರೇಕ್ಷಕರ ಹೃದಯವನ್ನು ಗೆದ್ದಿದ್ದಾರೆ. ಭಗವಂತ ಕೇಸರಿ ಚಿತ್ರದ ಯಶಸ್ಸಿನ ನಂತರ ಶ್ರೀಲೀಲಾ ಸಂಭಾವನೆಯನ್ನು ಹೆಚ್ಚಿಸಿದ್ದಾರೆ. ಒಂದು ಸಿನಿಮಾಗೆ 3.5 ಕೋಟಿ ಅಥವಾ 3 ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಳ್ಳುತ್ತಿದ್ದ ನಟಿ ಈಗ 4 ಕೋಟಿ ರೂಪಾಯಿಗೆ ಏರಿಕೆ ಮಾಡಿದ್ದಾರೆ. ಸದ್ಯ ಸಿನಿಮಾ ಜೊತೆಗೆ ಶ್ರೀಲೀಲಾ ಸಂಭಾವನೆ ಮ್ಯಾಟರ್ ಸಿನಿಪಂಡಿತರ ಚರ್ಚೆಗೆ ಗ್ರಾಸವಾಗಿದೆ.

Related Video