Asianet Suvarna News Asianet Suvarna News

ಬ್ಲ್ಯಾಕ್ ಬಾಡಿಕಾನ್ ಡ್ರೆಸ್‌ನಲ್ಲಿ ಮಾನುಷಿ ಚಿಲ್ಲರ್ ಮಿಂಚಿಂಗ್; ಈಗೇನು ಮಾಡ್ತಿದ್ದಾರೆ ಮಾಜಿ ವಿಶ್ವ ಸುಂದರಿ?

ಮಾಜಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಏನ್ಮಾಡ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಅಕ್ಷಯ್ ಕುಮಾರ್ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾ ಬಳಿಕ ಮಾನುಷಿ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಅಲ್ಲದೆ ಸಾರ್ವಜನಿಕವಾಗಿಯೂ ಹೆಚ್ಚಾಗಿ ಎಲ್ಲೂ ಕಾಣಿಸಿಕೊಂಡಿಲ್ಲ ಇದೀಗ ಮಾನುಷಿ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. 

ಮಾಜಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಏನ್ಮಾಡ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಅಕ್ಷಯ್ ಕುಮಾರ್ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾ ಬಳಿಕ ಮಾನುಷಿ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಅಲ್ಲದೆ ಸಾರ್ವಜನಿಕವಾಗಿಯೂ ಹೆಚ್ಚಾಗಿ ಎಲ್ಲೂ ಕಾಣಿಸಿಕೊಂಡಿಲ್ಲ ಇದೀಗ ಮಾನುಷಿ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬ್ಲ್ಯಾಕ್ ಬಾಡಿಕಾನ್ ಉಡುಪಿನಲ್ಲಿ ಪಾಪರಾಜಿಗಳ ಮುಂದೆ ಹಾಜರಾಗಿರುವ ಮಾನುಷಿ ಚಿಲ್ಲರ್ ಕ್ಯಾಮರಾಗೆ ಪೋಸ್ ನೀಡಿ ಹೊರಟು ಹೋದರು. ಮಾನುಷಿ ಸಿಂಪಲ್ ಅಂಡ್ ಸ್ಟೈಲಿಶ್ ಲುಕ್ ಅಭಿಮಾನಿಗಳ ಗಮನಸೆಳೆಯುತ್ತಿದೆ. ಮಾನುಷಿ ಚಿಲ್ಲರ್ ಸದ್ಯ ದಿ ಇಂಡಿಯನ್ ಫ್ಯಾಮಿಲಿ ಮತ್ತು ಟೆಹ್ರಾನ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಮಾನುಷಿ ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ ವಿಜಯ್ ಕಿರಗಂದೂರ್ ಜೊತೆ ಕಾಣಿಸಿಕೊಂಡಿದ್ದರು. ಬಳಿಕ ಮಾನುಷಿ ಕನ್ನಡ ನಿರ್ಮಾಪಕರ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೆ ಬಳಿಕ ಯಾವುದೇ ಅಪ್ ಡೇಟ್ ಹೊರಬಿದ್ದಿಲ್ಲ.