ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್! ವಿಡಿಯೋ ವೈರಲ್ ಬಳಿಕ ಕ್ಷಮೆ ಕೇಳಿದ ನಟ!

ನಟ ನಾಗಾರ್ಜುನ  ಬಳಿ ಫೋಟೋ ತೆಗೆಸಿಕೊಳ್ಳಲು ಓಡೋಡಿ ಬಂದ ಅಭಿಮಾನಿಯನ್ನು ಅವರ ಬಾಡಿಗಾರ್ಡ್ ತಳ್ಳಿ ಬೀಳಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್‌ ಆಗುತ್ತಿದೆ.

First Published Jun 25, 2024, 9:49 AM IST | Last Updated Jun 25, 2024, 9:49 AM IST

ನಟ ನಾಗಾರ್ಜುನ (Nagarjuna) ಅವರ ಒಂದು ವಿಡಿಯೋ ವೈರಲ್ ಆಗಿದೆ. ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಅವರ ಜೊತೆ ಫೋಟೋ(Photo)ತೆಗೆಸಿಕೊಳ್ಳಲು ಅಭಿಮಾನಿಯೊಬ್ಬರು ಓಡೋಡಿ ಬಂದಿದ್ದಾರೆ. ಆದರೆ ಅವರನ್ನು ನಾಗಾರ್ಜುನ ಬಾಡಿಗಾರ್ಡ್(Bodyguard) ತಳ್ಳಿ ಬೀಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೋ ನೋಡಿದ ಬಳಿಕ ಸ್ವತಃ ನಾಗಾರ್ಜುನ ಅವರು ಕ್ಷಮೆ ಕೇಳಿದ್ದಾರೆ. ಈ ಘಟನೆ ನಡೆದಾಗ ನಾಗಾರ್ಜುನ ಜೊತೆ ಕಾಲಿವುಡ್ ನಟ ಧನುಷ್ ಕೂಡ ಇದ್ದರು. ‘ನಿಮ್ಮ ಮಾನವೀಯತೆ ಎಲ್ಲಿ ಹೋಯಿತು ನಾಗಾರ್ಜುನ ಅವರೇ?’ ಎಂಬ ಕ್ಯಾಪ್ಷನ್‌ನೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಇದಕ್ಕೆ ಜನರು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಸ್ಟಾರ್ ನಟರನ್ನು ಆರಾಧಿಸುವುದನ್ನು ಮೊದಲು ಬಿಡಿ’ ಎಂದು ಅಭಿಮಾನಿಗಳಿಗೆ ಕೆಲವು ನೆಟ್ಟಿಗರು ಕಿವಿಮಾತು ಕೇಳಿದ್ದಾರೆ. ವೈರಲ್ ಆಗಿರುವ ವಿಡಿಯೋ ನೋಡಿ ನಾಗಾರ್ಜುನ ಅವರು ಪ್ರತಿಕ್ರಿಯಿಸಿದ್ದಾರೆ. ‘ಇದು ಈಗತಾನೇ ನನ್ನ ಗಮನಕ್ಕೆ ಬಂತು. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಯಲ್ಲಿ ನಾನು ಕ್ಷಮೆ ಕೇಳುತ್ತೇನೆ. ಇನ್ಮುಂದೆ ಎಚ್ಚರಿಕೆ ವಹಿಸುತ್ತೇನೆ. ಈ ರೀತಿ ಇನ್ನೆಂದೂ ಆಗುವುದಿಲ್ಲ’ ಎಂದು ನಾಗಾರ್ಜುನ ಅವರು ಭರವಸೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸೆಲೆಬ್ರೆಟಿ ಜ್ಯೋತಿಷಿ ವೇಣುಸ್ವಾಮಿಯಿಂದ ಮನೆಯಲ್ಲಿ ಪೂಜೆ! ರಶ್ಮಿಕಾ ಮಂದಣ್ಣ ಹಾದಿಯಲ್ಲೇ ನಿಶ್ವಿಕಾ ನಾಯ್ಡು!

Video Top Stories