ಪ್ರೀ ರಿಲೀಸ್‌ ಕಾರ್ಯಕ್ರಮಕ್ಕೆ ಗೈರಾದ ನಯನತಾರಾ

ಮೆಗಾಸ್ಟಾರ್ ಅಭಿನಯದ  ಗಾಡ್ ಫಾದರ್ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಅನಂತಪುರದಲ್ಲಿ ಚಿತ್ರದ ಅದ್ಧೂರಿ ಪ್ರೀ ರಿಲೀಸ್‌ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಯನತಾರಾ ಭಾಗಿಯಾಗದೆ ಚಿತ್ರತಂಡಕ್ಕೆ ಶಾಕ್ ಕೊಟ್ಟಿದ್ದರು.   
 

First Published Oct 8, 2022, 3:52 PM IST | Last Updated Oct 8, 2022, 3:52 PM IST

ಚಿರಂಜೀವಿ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಗಾಡ್ ಫಾದರ್  ಸಿನಿಮಾ ತೆರೆಮೇಲೆ ಬಂದಿದ್ದು, ಚಿತ್ರದ ಪ್ರಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ.ಇನ್ನು ಸಿನಿಮಾ ಪ್ರಚಾರಕ್ಕೆ ಸಂಬಂಧಿಸಿದಂತೆ ಅನಂತಪುರದಲ್ಲಿ ಗಾಡ್‌ ಫಾದರ್‌  ಸಿನಿಮಾದ ಅದ್ಧೂರಿ ಪ್ರೀ ರಿಲೀಸ್‌ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಈ ಈವೆಂಟ್ ನಲ್ಲಿ ನಯನತಾರಾ ಗೈರಾಗಿ ಚಿತ್ರತಂಡಕ್ಕೆ ಶಾಕ್ ಕೊಟ್ಟಿದ್ದು, ನಯನತಾರಾ ಮುಖ್ಯ ಅತಿಥಿಯಾಗಿ ಬರುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಗಾಡ್ ಫಾದರ್ ಸಿನಿಮಾದಲ್ಲಿ ನಯನತಾರಾ ಕೂಡ ನಟಿಸಿದ್ದಾರೆ.  

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ