
ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ-ಬೊಮ್ಮನ್ನನ್ನು ಭೇಟಿ ಮಾಡಲಿರುವ ಪ್ರಧಾನಿ
ಆಸ್ಕರ್ ಪ್ರಶಸ್ತಿ ತಂದುಕೊಟ್ಟ ‘ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯಲ್ಲಿ ಕಾಣಿಸಿಕೊಂಡ ಬೆಳ್ಳಿ ಮತ್ತು ಬೊಮ್ಮನ್ ದಂಪತಿಯನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ.
ಆಸ್ಕರ್ ಪ್ರಶಸ್ತಿ ತಂದುಕೊಟ್ಟ ‘ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯಲ್ಲಿ ಕಾಣಿಸಿಕೊಂಡ ಬೆಳ್ಳಿ ಮತ್ತು ಬೊಮ್ಮನ್ ದಂಪತಿಯನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ. ಏ. 9ರಂದು ತಮಿಳುನಾಡಿನ ಮುದುಮಲೈನಲ್ಲಿರುವ ಹುಲಿ ರಕ್ಷಿತಾರಣ್ಯಕ್ಕೆ ತೆರಳಿ ಆನೆಗಳ ಆರೈಕೆ ಮಾಡುವ ಬೆಳ್ಳಿ ಮತ್ತು ಬೊಮ್ಮನ್ ಭೇಟಿ ಮಾಡಲಿದ್ದಾರೆ. ಈ ವೇಳೆ ಅವರು ಬೆಳ್ಳಿ ಮತ್ತು ಬೊಮ್ಮನ್ ದಂಪತಿ ಜೊತೆ ಮಾತನಾಡಲಿದ್ದಾರೆ. ಅನಾಥ ಆನೆಗಳನ್ನು ಸಾಕುವ ಕಾಯಕದಲ್ಲಿ ಈ ದಂಪತಿ ತೊಡಗಿಕೊಂಡಿದ್ದಾರೆ. ಅವರ ಜೀವನದ ಕಥೆಯನ್ನು ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದಲ್ಲಿ ಮನಮುಟ್ಟುವಂತೆ ತೋರಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ