Asianet Suvarna News Asianet Suvarna News

ಪೂನಂ ಪಾಂಡೆಗೆ 5 ವರ್ಷಗಳ ಜೈಲು ಶಿಕ್ಷೆ!?: ಸಾವಿನಾಟ ಆಡಿದ್ದಕ್ಕೆ ಸಂಕಷ್ಟ!

ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಪೂನಂ ಪಾಂಡೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಮಾಹಿತಿ ಉದ್ಯಮ ಕಾಯಿದೆ, 2000 ರ ಸೆಕ್ಷನ್ 67 ರ ಪ್ರಕಾರ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದರೆ 3 ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. 

First Published Feb 7, 2024, 1:57 PM IST | Last Updated Feb 7, 2024, 1:57 PM IST

ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಪೂನಂ ಪಾಂಡೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಮಾಹಿತಿ ಉದ್ಯಮ ಕಾಯಿದೆ, 2000 ರ ಸೆಕ್ಷನ್ 67 ರ ಪ್ರಕಾರ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದರೆ 3 ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇದಲ್ಲದೆ, ಅಪರಾಧದ ಆರೋಪ ಹೊತ್ತಿರುವ ವ್ಯಕ್ತಿಯು 5 ರಿಂದ 10 ಲಕ್ಷದವರೆಗಿನ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಸಹ ಕಾಯಿದೆ ಹೇಳುತ್ತದೆ.  ಈ ಸೆಕ್ಷನ್‌ಗಳ ಅಡಿಯಲ್ಲಿ ಪೂನಂ ಪಾಂಡೆ ವಿರುದ್ಧ ಯಾರಾದರೂ ಪ್ರಕರಣ ದಾಖಲಿಸಿದರೆ 3 ರಿಂದ 5 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಹಲವರು ಪೂನಂ ಪಾಂಡೆ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಕಾನೂನು ತಜ್ಞರು ಪೂನಂ ಪಾಂಡೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತಪ್ಪು ನಿದರ್ಶನವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದೇ ಎಂದು ಕಾದು ನೋಡಬೇಕಿದೆ.
 

Video Top Stories