Radhe Shyam ಚಿತ್ರಕ್ಕೆ ಪ್ರಭಾಸ್ ಪಡೆದಿರುವ ಸಂಭಾವನೆ ಎಷ್ಟು ಗೊತ್ತಾ?

'ಪ್ಯಾನ್ ಇಂಡಿಯಾ ಸ್ಟಾರ್‌' ಡಾರ್ಲಿಂಗ್ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿರುವ ಔಟ್ ಅ್ಯಂಡ್ ಔಟ್ ಲವ್ ಕಮ್ ರೊಮ್ಯಾಂಟಿಕ್ 'ರಾಧೆ ಶ್ಯಾಮ್'  ಚಿತ್ರ ಇದೇ ಮಾರ್ಚ್ 11ರಂದು ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

Share this Video
  • FB
  • Linkdin
  • Whatsapp

'ಪ್ಯಾನ್ ಇಂಡಿಯಾ ಸ್ಟಾರ್‌' ಡಾರ್ಲಿಂಗ್ ಪ್ರಭಾಸ್ (Prabhas) ಹಾಗೂ ಪೂಜಾ ಹೆಗ್ಡೆ (Pooja Hegde) ನಟಿಸಿರುವ ಔಟ್ ಅ್ಯಂಡ್ ಔಟ್ ಲವ್ ಕಮ್ ರೊಮ್ಯಾಂಟಿಕ್ 'ರಾಧೆ ಶ್ಯಾಮ್' (Radhe Shyam) ಚಿತ್ರ ಇದೇ ಮಾರ್ಚ್ 11ರಂದು ವಿಶ್ವದಾದ್ಯಂತ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣಲಿದೆ. ಈ ಮಧ್ಯೆ ಪ್ರಭಾಸ್ ಈ ಚಿತ್ರಕ್ಕಾಗಿ 100 ಕೋಟಿ ಸಂಭಾವನೆಯನ್ನು ಪಡೆದಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಗಾಸಿಪ್ ಆಗುತ್ತಿದೆ. ಆದರೆ ಇದು ಎಷ್ಟು ನಿಜವೋ? ಸುಳ್ಳೋ ಎಂಬುದು ಇಲ್ಲಿಯವರೆಗೂ ತಿಳಿದುಬಂದಿಲ್ಲ. ಈ ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ (Radha Krishna Kumar) ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

Adipurush: ಪ್ರಭಾಸ್‌-ಸೈಫ್‌ ಅಲಿ ಖಾನ್‌ ಚಿತ್ರದ ರಿಲೀಸ್​ ಡೇಟ್​ ಅನೌನ್ಸ್!

ಪೂಜಾ ಹೆಗ್ಡೆ ಅವರು ಪ್ರೇರಣಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪ್ರಭಾಸ್ ವಿಕ್ರಮಾದಿತ್ಯ ಎಂಬ ಹಸ್ತಸಾಮುದ್ರಿಕ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರವು 1970ರ ಯುರೋಪ್ ಹಿನ್ನಲೆಯಲ್ಲಿದೆ ಎಂದು ಹೇಳಲಾಗುತ್ತದೆ. ರೊಮ್ಯಾಂಟಿಕ್​ ಕಥಾ ಹೊಂದಿರುವ 'ರಾಧೆ ಶ್ಯಾಮ್' ಚಿತ್ರಕ್ಕೆ ಭೂಷಣ್ ಕುಮಾರ್, ವಂಶಿ ಮತ್ತು ಪ್ರಮೋದ್ ನಿರ್ಮಾಣ ಮಾಡಿದ್ದಾರೆ. ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜನೆ, ಮನೋಜ್ ಪರಮಹಂಸ ಛಾಯಾಗ್ರಹಣ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಇಟಲಿ, ಜಾರ್ಜಿಯಾ, ಫ್ರಾನ್ಸ್ ಮತ್ತು ಇತರ ಯುರೋಪಿಯನ್ ದೇಶಗಳಲ್ಲಿ ಚಿತ್ರವನ್ನು ಚಿತ್ರೀಕರಿಸಲಾಗಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video