Asianet Suvarna News Asianet Suvarna News

ಆಕಾಶದಲ್ಲಿ ಪತಿಯ 30ನೇ ವರ್ಷದ ಬರ್ತಡೇ ಆಚರಿಸಿದ ಪ್ರಿಯಾಂಕಾ ಚೋಪ್ರಾ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ. ಮದುವೆಯಾದ ಬಳಿಕ ಪ್ರಿಯಾಂಕಾ ಚೋಪ್ರಾ ಅಲ್ಲೇ ನೆಲೆಸಿದ್ದಾರೆ. ಸದ್ಯ ಬಾಲಿವುಡ್ ನಿಂದ ದೂರ ಇರುವ ಪ್ರಿಯಾಂಕಾ ಚೋಪ್ರಾ ಹಾಲಿವುಡ್ ಸಿನಿಮಾ ಹಾಗೂ ವೆಬ್ ಸೀರಿಸ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಪ್ರಿಯಾಂಕಾ ತನ್ನ ಪತಿ ನಿಕ್ ಜೋನಸ್ ಹುಟ್ಟುಹಬ್ಬವನ್ನು ಆಚರಿಸಿದರು. 

Sep 19, 2022, 4:33 PM IST

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ. ಮದುವೆಯಾದ ಬಳಿಕ ಪ್ರಿಯಾಂಕಾ ಚೋಪ್ರಾ ಅಲ್ಲೇ ನೆಲೆಸಿದ್ದಾರೆ. ಸದ್ಯ ಬಾಲಿವುಡ್ ನಿಂದ ದೂರ ಇರುವ ಪ್ರಿಯಾಂಕಾ ಚೋಪ್ರಾ ಹಾಲಿವುಡ್ ಸಿನಿಮಾ ಹಾಗೂ ವೆಬ್ ಸೀರಿಸ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಪ್ರಿಯಾಂಕಾ ತನ್ನ ಪತಿ ನಿಕ್ ಜೋನಸ್ ಹುಟ್ಟುಹಬ್ಬವನ್ನು ಆಚರಿಸಿದರು. ಇಬ್ಬರ ಹುಟ್ಟುಹಬ್ಬದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. 30ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ನಿಕ್ ಜೋನಸ್ ಅವರಿಗೆ ಪ್ರಿಯಾಂಕಾ ಸಖತ್ ಸರ್ಪ್ರೈಸ್ ನೀಡಿದ್ದಾರೆ. ಹೌದು, ಆಕಾಶದಲ್ಲಿ ಪತಿಯ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ವಿಭಿನ್ನವಾಗಿ ಜನ್ಮದಿನ ಸಂಭ್ರಮಿಸಿರುವ ಫೋಟೋಗಳು ವೈರಲ್ ಆಗಿವೆ.