ರಾಮ್​ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಚೆಕ್​ ಬೌನ್ಸ್​ ಕೇಸ್ ನಲ್ಲಿ ಆರ್.ಜಿ.ವಿ ಬಂಧನಕ್ಕೆ ಆದೇಶ

ಟಾಲಿವುಡ್ ನ ಸ್ಟಾರ್ ಡೈರೆಕ್ಟರ್​ ರಾಮ್ ಗೋಪಾಲ್ ವರ್ಮಾ ಗೆ ಈಗ ಸಂಕಷ್ಟ ಎದುರಾಗಿದೆ.

Share this Video
  • FB
  • Linkdin
  • Whatsapp

ಚೆಕ್ ಬೌನ್ಸ್​ ಪ್ರಕರಣದಲ್ಲಿ ರಾಮ್​ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ ಎದುರಾಗಿದೆ. 2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಆ ಸಮಯದಲ್ಲಿ ಮಹೇಶ್ಚಂದ್ರ ಮಿಶ್ರಾ ಎಂಬ ವ್ಯಕ್ತಿ ರಾಮಗೋಪಾಲ್ ವರ್ಮಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ರು. ಕಳೆದ ಏಳು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿತ್ತು. ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆರ್​​ಜಿವಿಗೆ ನೋಟಿಸ್ ನೀಡಿದರೂ ಅವರು ಕೋರ್ಟ್​ಗೆ ಬಂದಿರಲಿಲ್ಲ. ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

Related Video