ಡಿವೋರ್ಸ್ ವದಂತಿಗೆ ತೆರೆ ಎಳೆದ ದೀಪ್‌ವೀರ್: ಇಬ್ಬರ ರೊಮ್ಯಾಂಟಿಕ್ ಟ್ರಿಪ್ ಫೋಟೋ ವೈರಲ್

ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ದಂಪತಿ ಪ್ರವಾಸಕ್ಕೆ ಹೋಗಿರುವ ಫೋಟೋಗಳು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Share this Video
  • FB
  • Linkdin
  • Whatsapp

ಬಾಲಿವುಡ್ ಸ್ಟಾಕ್ ಜೋಡಿ, ಕ್ಯೂಟ್ ಕಪಲ್ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ದಾಂಪತ್ಯದಲ್ಲಿ ಬಿರುಕು ಮೂಡಿದೆ, ವಿಚ್ಛೇದನಕ್ಕೆ ಸಜ್ಜಾಗಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ತಿಂಗಳ ಹಿಂದೆ ವೈರಲ್ ಆಗಿತ್ತು. ಆದರೀಗ ಈ ಸುದ್ದಿಗೆ ಬ್ರೇಕ್ ಹಾಕಿದ್ದಾರೆ ಸ್ಟಾರ್ ಜೋಡಿ. ಇಬ್ಬರ ರೊಮ್ಯಂಟಿಕ್ ಫೋಟೋಗಳು ಎಲ್ಲಾ ವದಂತಿಯನ್ನು ತಳ್ಳಿ ಹಾಕಿದೆ. ಹೌದು ದೀಪಿಕಾ ಮತ್ತು ರಣ್ವೀರ್ ಸಿಂಗ್ ಇಬ್ಬರೂ ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ. ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ರಣ್ವೀರ್ ಸಿಂಗ್ ಪತ್ನಿಯ ಫೋಟೋ ಶೇರ್ ಮಾಡಿ ಕ್ಯೂಟಿ ಎಂದು ಬರೆದುಕೊಂಡಿದ್ದಾರೆ. ಹಾಗೂ ಕಿಸ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video