ಮ್ಯಾಗಜಿನ್ ಕವರ್ ಪೇಜ್‌ನಲ್ಲಿ ರಶ್ಮಿಕಾ ಬೋಲ್ಡ್ ಪೋಸ್

ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಜಾಹೀರಾತುಗಳಲ್ಲಿಯೂ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ಫಿಲ್ಮ್ ಫೇರ್ ಮ್ಯಾಗಜಿನ್‌ಗೆ ಪೋಸ್ ನೀಡಿದ್ದು ರಶ್ಮಿಕಾ ಫೋಟೋ ವೈರಲ್ ಆಗಿದೆ.

Share this Video
  • FB
  • Linkdin
  • Whatsapp

ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಜಾಹೀರಾತುಗಳಲ್ಲಿಯೂ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ಫಿಲ್ಮ್ ಫೇರ್ ಮ್ಯಾಗಜಿನ್‌ಗೆ ಪೋಸ್ ನೀಡಿದ್ದು ರಶ್ಮಿಕಾ ಫೋಟೋ ವೈರಲ್ ಆಗಿದೆ. ಫಿಲ್ಮ್ ಫೇರ್ ಮ್ಯಾಗಜಿನ್ ಫೋಟೋವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಶ್ಮಿಕಾ ಹಾಟ್ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ರಶ್ಮಿಕಾ ಫೋಟೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದುಬಂದಿದೆ. ರಶ್ಮಿಕಾ ಸದ್ಯ ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದರು. ಈ ಸಿನಿಮಾಗೂ ಮೊದಲು ರಶ್ಮಿಕಾ ಅಮಿತಾಭ್ ಜೊತೆ ಗುಡ್‌ಬೈ ಮತ್ತು ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸಿದ್ದರು. ತೆಲುಗಿನಲ್ಲಿ ರಶ್ಮಿಕಾ ಪುಷ್ಪ-2ಗಾಗಿ ಕಾಯುತ್ತಿದ್ದಾರೆ. ತಮಿಳಿನಲ್ಲಿ ವಿಜಯ್ ಜೊತೆ ನಟಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video