Asianet Suvarna News Asianet Suvarna News

ರಶ್ಮಿಕಾ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು; ವಿಡಿಯೋ ವೈರಲ್

ನಟಿ ರಶ್ಮಿಕಾ ಮಂದಣ್ಣ ಸದ್ಯ ದಕ್ಷಿಣ ಭಾರತದ ಜೊತೆಗೆ ಬಾಲಿವುಡ್ ನಲ್ಲೂ ಮಿಂಚುತ್ತಿದ್ದಾರೆ. ರಶ್ಮಿಕಾ ಎಲ್ಲೇ ಹೋದರು ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಮುಂಬೈನಲ್ಲಿ ಕಾಣಿಸಿಕೊಂಡಿದ್ದ ರಶ್ಮಿಕಾ ಅವರನ್ನು ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಸೆಲ್ಫಿಗಾಗಿ ಅಭಿಮಾನಿಗಳ ನಡುವೆ ನೂಕುನುಗ್ಗಲಾಗಿದೆ. ಆದರು ರಶ್ಮಿಕಾ ಧೈರ್ಯವಾಗಿ ಸೆಲ್ಫಿಗೆ ಪೋಸ್ ನೀಡಿ ಅಲ್ಲಿಂದ ಹೊರಟು ಹೋಗಿದ್ದಾರೆ. 

 

ನಟಿ ರಶ್ಮಿಕಾ ಮಂದಣ್ಣ ಸದ್ಯ ದಕ್ಷಿಣ ಭಾರತದ ಜೊತೆಗೆ ಬಾಲಿವುಡ್ ನಲ್ಲೂ ಮಿಂಚುತ್ತಿದ್ದಾರೆ. ರಶ್ಮಿಕಾ ಬಾಲಿವುಡ್ ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮೊದಲ ಸಿನಿಮಾ ಬಿಡುಗಡೆಗೂ ಮೊದಲೇ ರಶ್ಮಿಕಾ ಮೂರು ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಬಹು ಬೇಡಿಕೆಯ ನಟಿ ರಶ್ಮಿಕಾ ಕ್ರೇಜ್ ಬಾಲಿವುಡ್ ನಲ್ಲಿ ಜೋರಾಗಿದೆ. ರಶ್ಮಿಕಾ ಎಲ್ಲೇ ಹೋದರು ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಮುಂಬೈನಲ್ಲಿ ಕಾಣಿಸಿಕೊಂಡಿದ್ದ ರಶ್ಮಿಕಾ ಅವರನ್ನು ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಸೆಲ್ಫಿಗಾಗಿ ಅಭಿಮಾನಿಗಳ ನಡುವೆ ನೂಕುನುಗ್ಗಲಾಗಿದೆ. ಆದರು ರಶ್ಮಿಕಾ ಧೈರ್ಯವಾಗಿ ಸೆಲ್ಫಿಗೆ ಪೋಸ್ ನೀಡಿ ಅಲ್ಲಿಂದ ಹೊರಟು ಹೋಗಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

Video Top Stories