Rashmika Mandanna: ರಶ್ಮಿಕಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಷ! ಪ್ರಾಣಾಪಾಯದಿಂದ ಪಾರಾದ ನಟಿ !

ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ..!
ರಶ್ಮಿಕಾ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ..!
ಆತಂಕದ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ ಮಂದಣ್ಣ..!
 

First Published Feb 20, 2024, 10:23 AM IST | Last Updated Feb 20, 2024, 10:24 AM IST

ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ(Rashmika Mandanna) ಹಾಗೂ ನಟಿ ಶ್ರದ್ಧಾ ದಾಸ್(Shraddha Das) ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಷ(Emergency landing) ಮಾಡಲಾಗಿದೆ. ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾಗಿರುವುದಾಗಿ ಹೇಳಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಶ್ರದ್ಧಾದಾಸ್ ಅವರುಗಳು ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಮುಂಬೈ ವಿಮಾನ ನಿಲ್ದಾಣದಿಂದ ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದ್ದರು. ಇಬ್ಬರೂ ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ತಮ್ಮ ಹಾಗೂ ಶ್ರದ್ಧಾದಾಸ್ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದು, ‘ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು’ ಎಂದಿದ್ದಾರೆ ರಶ್ಮಿಕಾ. ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Yash: ಛತ್ರಪತಿ ಶಿವಾಜಿ ಆಗ್ತಾರಾ ಯಶ್..? ರಾಕಿಂಗ್‌ ಸ್ಟಾರ್‌ ರಾಮಾಯಣ ಯಾವಾಗ ಶುರು..?

Video Top Stories