ನೋ ಪಾಲಿಟಿಕ್ಸ್, ನೋ ಪ್ರಚಾರ, ಬರಿ ಕಾಂತಾರ..!
ರಿಷಬ್ ಶೆಟ್ಟಿ ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಾರೆ ಎನ್ನುವ ಮಾತಿದ್ದು, ರಿಷಬ್ ಸ್ಪಷ್ಟನೆ ನೀಡಿದ್ದಾರೆ. ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವುದಾಗಿ ಅವರು ಹೇಳಿದ್ದಾರೆ. ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ‘ಕಾಂತಾರ 2’ ಸಿನಿಮಾ ಬಗ್ಗೆ ಅಪ್ಡೇಟ್ ನೀಡಿದ್ದಾರೆ.
ರಿಷಬ್ ಶೆಟ್ಟಿ ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಾರೆ ಎನ್ನುವ ಮಾತಿದ್ದು, ರಿಷಬ್ ಸ್ಪಷ್ಟನೆ ನೀಡಿದ್ದಾರೆ. ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವುದಾಗಿ ಅವರು ಹೇಳಿದ್ದಾರೆ. ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ‘ಕಾಂತಾರ 2’ ಸಿನಿಮಾ ಬಗ್ಗೆ ಅಪ್ಡೇಟ್ ನೀಡಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಿಷಬ್ ಇಬ್ಬರು ಒಟ್ಟಾಗಿ ಫೋಟೋ ತೆಗೆಸಿಕೊಂಡಿದ್ದರು. ಇದಕ್ಕೆ ರಾಜಕೀಯ ಬಣ್ಣ ಹಚ್ಚಲಾಗಿತ್ತು. ಆದರೆ, ಆ ರೀತಿ ಯಾವುದೇ ಆಲೋಚನೆ ಇಲ್ಲ ಎಂದು ರಿಷಬ್ ಶೆಟ್ಟಿ ಮಾಹಿತಿ ನೀಡಿದ್ದಾರೆ.ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಹೋದಾಗ ಮುಖ್ಯಮಂತ್ರಿಗಳ ಭೇಟಿಯಾಯಿತು. ರಾಜಕೀಯದ ಬಣ್ಣ ಬೇಡ. ಕಾಂತಾರದ ಬರವಣಿಗೆಯಲ್ಲಿ ಸಂಪೂರ್ಣ ತೊಡಗಿ ಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಇರಲಿ ಎಂದು ಸ್ಪಷ್ಟನೆ ನೀಡಿದ್ದಾರೆ.