
ಯುವರಾಜ್ ಕುಮಾರ್ ಎದುರು ತೊಡೆತಟ್ಟಲಿದ್ದಾರೆ ಡಾಲಿ ಧನಂಜಯ್?
ಡಾ.ರಾಜ್ ಕುಮಾರ್ ಮೊಮ್ಮಗ ಯುವರಾಜ್ ಕುಮಾರ್ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಈಗಾಗಲೇ ಯುವರಾಜ್ ಕುಮಾರ್ ಅವರ ಚೊಚ್ಚಲ ಸಿನಿಮಾ ಅನೌನ್ಸ್ ಆಗಿದ್ದು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಯುವರಾಜ್ ಕುಮಾರ್ ಎದುರು ವಿಲನ್ ಆಗಿ ಡಾಲಿ ಧನಂಜಯ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇತ್ತೀಚಿಗಷ್ಟೆ ಸಂತೋಷ್ ಆನಂದ್ ರಾಮ್, ಯುವರಾಜ್ ಕುಮಾರ್ ಮತ್ತು ಡಾಲಿ ಒಟ್ಟಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಡಾ.ರಾಜ್ ಕುಮಾರ್ ಮೊಮ್ಮಗ ಯುವರಾಜ್ ಕುಮಾರ್ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಈಗಾಗಲೇ ಯುವರಾಜ್ ಕುಮಾರ್ ಅವರ ಚೊಚ್ಚಲ ಸಿನಿಮಾ ಅನೌನ್ಸ್ ಆಗಿದ್ದು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೀಗ ಈ ಬಹುನಿರೀಕ್ಷೆಯ ಸಿನಿಮಾದ ಬಗ್ಗೆ ಮತ್ತೊಂದು ಸುದ್ದಿ ವೈರಲ್ ಆಗಿದೆ. ಯುವರಾಜ್ ಕುಮಾರ್ ಎದುರು ವಿಲನ್ ಆಗಿ ಡಾಲಿ ಧನಂಜಯ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇತ್ತೀಚಿಗಷ್ಟೆ ಸಂತೋಷ್ ಆನಂದ್ ರಾಮ್, ಯುವರಾಜ್ ಕುಮಾರ್ ಮತ್ತು ಡಾಲಿ ಒಟ್ಟಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.