Asianet Suvarna News Asianet Suvarna News

ಅಭಿಮಾನಿಗಳ ಜೊತೆ ಕ್ರೇಜಿ ಸ್ಟಾರ್ ಅದ್ದೂರಿ ಹುಟ್ಟುಹಬ್ಬ; ವಿಶೇಷ ಕೇಕ್ ಕತ್ತರಿಸಿ ಸಂಭ್ರಮಿಸಿದ ರವಿಚಂದ್ರನ್

ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಹುಟ್ಟುಹಬ್ಬ ಸಂಭ್ರಮ. ಇಂದು (ಮೇ, 30) ರವಿಮಾಮ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನೆಚ್ಚಿನ ನಟನಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ. ರಾಜಾಜಿನಗರದ ನಿವಾಸದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಅಪಾರ ಸಂಖ್ಯೆಯ ಅಭಿಮಾನಿಗಳ ನಡುವೆ ರವಿಚಂದ್ರನ್ ಕೇಕ್ ಕತ್ತರಿ ಜನ್ಮ ದಿನ ಸಂಭ್ರಮಿಸಿದರು.

ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಹುಟ್ಟುಹಬ್ಬ ಸಂಭ್ರಮ. ಇಂದು (ಮೇ, 30) ರವಿಮಾಮ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನೆಚ್ಚಿನ ನಟನಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ರವಿಚಂದ್ರನ್ ಅವರ ಫೋಟೋ ಮತ್ತು ವಿಡಿಯೋಗಳನ್ನು ಶೇರ್ ಮಾಡಿ ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಅಭಿಮಾನಿಗಳು ಅಲ್ಲದೇ ಅನೇಕ ಗಣ್ಯರು ಸಹ ರವಿಚಂದ್ರನ್ ಅವರಿಗೆ ಶುಭಾಶಯ ಕೋರುತ್ತಿದ್ದಾರೆ. ಇನ್ನು ರಾಜಾಜಿನಗರದ ನಿವಾಸದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಅಪಾರ ಸಂಖ್ಯೆಯ ಅಭಿಮಾನಿಗಳ ನಡುವೆ ರವಿಚಂದ್ರನ್ ಕೇಕ್ ಕತ್ತರಿ ಜನ್ಮ ದಿನ ಸಂಭ್ರಮಿಸಿದರು.

 

Video Top Stories