Upendra: ಮಹೇಶ್‌ ಬಾಬು ಅಣ್ಣನಾಗ್ತಾರಾ ಸ್ಯಾಂಡಲ್‌ವುಡ್‌ನ ರಿಯಲ್‌ ಸ್ಟಾರ್‌?

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಕಾಂಬಿನೇಷನ್‌ಲ್ಲಿ ಸಿನಿಮಾವೊಂದು ಮೂಡಿ ಬರಲಿರುವ ಸುದ್ದಿ ಸಿನಿ ಅಂಗಳದಲ್ಲಿ ಕೇಳಿಬರುತ್ತಿದೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನ (Sandalwood) ರಿಯಲ್ ಸ್ಟಾರ್ ಉಪೇಂದ್ರ (Upendra) ಮತ್ತು ಟಾಲಿವುಡ್ (Tollywood) ಸೂಪರ್ ಸ್ಟಾರ್ ಮಹೇಶ್ ಬಾಬು (Mahesh Babu) ಕಾಂಬಿನೇಷನ್‌ಲ್ಲಿ ಸಿನಿಮಾವೊಂದು ಮೂಡಿ ಬರಲಿರುವ ಸುದ್ದಿ ಸಿನಿ ಅಂಗಳದಲ್ಲಿ ಕೇಳಿಬರುತ್ತಿದೆ. ಉಪ್ಪಿ ಟಾಲಿವುಡ್‌ಗೆ ಹೊಸಬರಲ್ಲವಾದರೂ, ಇಬ್ಬರು ಸ್ಟಾರ್ ನಟರು ಒಟ್ಟಿಗೆ ನಟಿಸುತ್ತಿರುವ ಬಗ್ಗೆ ಅಭಿಮಾನಿಗಳು (Fans) ತುಂಬಾ ಉತ್ಸುಕರಾಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas) ಆಕ್ಷನ್ ಕಟ್ ಹೇಳುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುತ್ತಪ್ಪ ರೈ ಆಗ್ತಿದ್ದಾರಾ ಉಪೇಂದ್ರ.? ಕುತೂಹಲ ಮೂಡಿಸಿದೆ ಆರ್‌ಜಿವಿ ಟ್ವೀಟ್..!

ಮಹೇಶ್ ಬಾಬು- ತ್ರಿವಿಕ್ರಮ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ‘ಎಸ್ಎಸ್ಎಂಬಿ 28’ ಎಂಬ ಶೀರ್ಷಿಕೆ ಇಟ್ಟಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ಅಣ್ಣನಾಗಿ ಉಪೇಂದ್ರ ನಟಿಸಲು ತ್ರಿವಿಕ್ರಮ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಪೇಂದ್ರ ಅವರು ಸಿನಿಮಾದಲ್ಲಿ ನಟಿಸಲು ಉತ್ಸಾಹ ತೋರಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. ಮಹೇಶ್ ಬಾಬು ಪ್ರಸ್ತುತ ‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಯುವ ನಿರ್ದೇಶಕ ಪರಶುರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video