ಡ್ರೆಸ್ ಓಕೆ.. ಮೇಕಪ್ ಈ ಪಾಟಿ ಯಾಕೆ ? ಊರ್ವಶಿ ರೌಟೇಲಾ ಟ್ರೋಲ್ ಆಗಿದ್ದು ಇದಕ್ಕೆ !

ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ಮೂಲಕ ಕನ್ನಡದ ಸಿನಿಪ್ರಿಯರಿಗೆ ಪರಿಚಯವಾದ ಬಹುಭಾಷಾ ನಟಿ ಊರ್ವಶಿ ರೌಟೇಲಾ ಹೊಸ ಫೋಟೋಶೂಟ್‌ ಮಾಡಿಸಿ, ಅದರಲ್ಲಿನ ಓವರ್‌ ಮೇಕಪ್‌ನಿಂದ ಸಖತ್‌ ಟ್ರೋಲ್‌ಗೆ ಒಳಗಾಗಿದ್ದಾರೆ.

Bindushree N  | Published: Dec 25, 2023, 11:29 AM IST

‘ಐರಾವತ’ ಬೆಡಗಿ ಊರ್ವಶಿ ರೌಟೇಲಾ(Urvashi Rautela) ಅವರು ಇದೀಗ ಹೊಸ ಫೋಟೋಶೂಟ್‌ನಲ್ಲಿ(Photo shoot) ಮಿಂಚಿದ್ದಾರೆ. ಹೊಸ ಫೋಟೋದಲ್ಲಿನ ಊರ್ವಶಿ ಓವರ್ ಮೇಕಪ್ ನೋಡಿ ನೆಟ್ಟಿಗರು ಸಖತ್ ಟ್ರೋಲ್ (Troll) ಮಾಡ್ತಿದ್ದಾರೆ.  ನಟಿಯ ನಯಾ ಲುಕ್ ಸಖತ್ ವೈರಲ್ ಆಗುತ್ತಿದೆ. ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಊರ್ವಶಿ ರೌಟೇಲಾ ಸದ್ದು ಮಾಡುತ್ತಲೇ ಇರುತ್ತಾರೆ. ಈಗ ಸುಂದರವಾದ ಮಿನುಗುವ ಡ್ರೆಸ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಫೋಟೋಶೂಟ್‌ನಲ್ಲಿ ಗ್ಲ್ಯಾಮರಸ್ ಆಗಿ ಊರ್ವಶಿ ಕಾಣಿಸಿಕೊಂಡಿದ್ದಾರೆ. ಈ ಹೊಸ ಫೋಟೋ ಶೇರ್ ಮಾಡ್ತಿದ್ದಂತೆ ಐರಾವತ ನಟಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. ಓವರ್ ಮೇಕಪ್ ಮಾಡಿಕೊಳ್ಳಬೇಡಿ. ಮಲಗುವಾಗಲೂ ಮೇಕಪ್ ತೆಗೆಯಲ್ಲ ಅನಿಸುತ್ತೆ ಎಂದೆಲ್ಲಾ ನೆಟ್ಟಿಗರು ಬಗೆ ಬಗೆಯ ಕಾಮೆಂಟ್ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಶಾರುಖ್‌ ಖಾನ್‌ V/S ಪ್ರಭಾಸ್ ಸಮರದಲ್ಲಿ ಗೆದ್ದಿದ್ದು ಯಾರು ? ಸಲಾರ್ ಫಸ್ಟ್ ಡೇ ಕಲೆಕ್ಷನ್ ಸುಮಾರು 200 ಕೋಟಿ..!

Read More...