ತೂಫಾನ್‌ನಂತೆ ಅಪ್ಪಳಿಸುತ್ತಿವೆ KGF 2 ದಾಖಲೆಗಳು

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾ ಏಪ್ರಿಲ್ 14ರಂದು ತೆರೆಗೆ ಬರುತ್ತಿದೆ. ಈಗಾಗಲೇ ಅನೇಕ ದಾಖಲೆ ನಿರ್ಮಿಸಿರುವ ಕೆಜಿಎಫ್-2, 70 ದೇಶಗಳಲ್ಲಿ ತೆರೆಗೆ ಬರುತ್ತಿದೆ. ಅಡ್ವಾನ್ಸ್ ಬುಕ್ಕಿಂಗ್ ವಿಚಾರದಲ್ಲೂ ದಾಖಲೆ ಬರೆದಿರುವ ಕೆಜಿಎಫ್-2 ಆರ್ ಆರ್ ಆರ್ ಸಿನಿಮಾ ದಾಖಲೆ ಬ್ರೇಕ್ ಮಾಡುತ್ತಾ ಎನ್ನುವುದು ಕುತೂಹಲ ಮೂಡಿಸಿದೆ.

Share this Video
  • FB
  • Linkdin
  • Whatsapp

KGF 2 ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷೆಯ ಸಿನಿಮಾ ಏಪ್ರಿಲ್ 14ರಂದು ತೆರೆಗೆ ಬರುತ್ತಿದೆ. ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿರುವ ಕೆಜಿಎಫ್2 ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಕನ್ನಡದ ಮೊದಲ ಸಿನಿಮಾವಾಗಿದೆ. ಅಮೆರಿಕಾದಲ್ಲೇ ಸಾವಿರಾರು ಸ್ಕ್ರೀನ್ ಗಳಲ್ಲಿ ಕೆಜಿಎಫ್-2 ರಾರಾಜಿಸಲಿದೆ. ವಿಶ್ವದಲ್ಲಿ 70 ದೇಶಗಳಲ್ಲಿ ತೆರೆಗೆ ಬರುತ್ತಿದೆ. ಈಗಾಗಲೇ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದ್ದು ದಾಖಲೆಯ ಬುಕ್ಕಿಂಗ್ ಆಗಿದೆ. ಇದು ಆರ್ ಆರ್ ಆರ್ ಸಿನಿಮಾದ ದಾಖಲೆಯನ್ನು ಧೂಳಿಪಟ ಮಾಡಲಿದೆ. ಇನ್ನು ಬಾಕ್ಸ್ ಆಫೀಸ್ ಗಳಿಕೆ ವಿಚಾರದಲ್ಲೂ ದಾಖಲೆ ಬರೆಯಲಿದೆಯಾ ಎನ್ನುವ ಕುತೂಹಲ ಈಗ ಹೆಚ್ಚಾಗಿದೆ.

Related Video