ಉತ್ತರಪ್ರದೇಶದಲ್ಲಿ ಹೆಚ್ಚುತ್ತಿದೆ ಕೊರೋನಾ ಸೋಂಕು..!
ರಾಜ್ಯಾದ್ಯಂತ ಕೋವಿಡ್ 19 ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಯೋಗಿ ಆದಿತ್ಯನಾಥ್ ಸರ್ಕಾರ ಯುಪಿಯ 15 ಜಿಲ್ಲೆಗಳಲ್ಲಿ ಜನತಾ ಕರ್ಫ್ಯೂ ವಿಧಿಸಿದೆ. ಏಪ್ರಿಲ್ 13ರವರೆಗೆ 15 ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್ ಆಗಲಿವೆ.
ಲಖನೌ(ಏ.08): ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರವೂ ಸೇರಿದಂತೆ ಉತ್ತರ ಪ್ರದೇಶದ 15 ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಲಾಕ್‌ಡೌನ್ ಉಲ್ಲಂಘಿಸುವವರ ಮೇಲೆ ಹದ್ದಿನ ಕಣ್ಣು, 40 ಬೈಕ್‌ನಲ್ಲಿ ಪೊಲೀಸರ ಗಸ್ತು!
ಇದರ ಪರಿಣಾಮ ಯೋಗಿ ಆದಿತ್ಯನಾಥ್ ಸರ್ಕಾರ ಯುಪಿಯ 15 ಜಿಲ್ಲೆಗಳಲ್ಲಿ ಜನತಾ ಕರ್ಫ್ಯೂ ವಿಧಿಸಿದೆ. ಏಪ್ರಿಲ್ 13ರವರೆಗೆ 15 ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್ ಆಗಲಿವೆ.
ಕೊರೋನಾ ವೈರಸ್ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ದೇಶಾದ್ಯಂತ 21 ದಿನಗಳ ಕಾಲ ಲಾಕ್‌ಡೌನ್ ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಇದರ ಹೊರತಾಗಿಯೂ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.