ಕೊರೋನಾ ಸಂಕಷ್ಟ: ಸರ್ವ ಪಕ್ಷ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ
ಸರ್ವಪಕ್ಷಗಳ ಸಭೆಯಲ್ಲಿ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಇದೀಗ 14ರ ಬಳಿಕ ಲಾಕ್‌ಡೌನ್ ತೆರವಾಗುತ್ತಾ? ಮುಂದುವರೆಯುತ್ತಾ ಎನ್ನುವ ಕುತೂಹಲ ಜೋರಾಗಿದೆ.
ನವದೆಹಲಿ(ಏ.08): ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಉಲ್ಬಣಿಸುತ್ತಿದ್ದು, ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದುಸರ್ವಪಕ್ಷ ಸಭೆ ಕರೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಪ್ರಮುಖ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ.
ಕೊರೋನಾ ವೈರಸ್ ಹಾವಳಿ: ಮೇ 15ರವರೆಗೆ ಶಾಲೆಗಳಿಲ್ಲ?
ಸರ್ವಪಕ್ಷಗಳ ಸಭೆಯಲ್ಲಿ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಇದೀಗ 14ರ ಬಳಿಕ ಲಾಕ್‌ಡೌನ್ ತೆರವಾಗುತ್ತಾ? ಮುಂದುವರೆಯುತ್ತಾ ಎನ್ನುವ ಕುತೂಹಲ ಜೋರಾಗಿದೆ.
ಲಾಕ್‌ಡೌನ್ ವಿಸ್ತರಣೆ?: IRCTC ಬುಕ್ಕಿಂಗ್ 30ರವರೆಗೂ ರದ್ದು!
ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವುದರಿಂದ ಹಲವು ತಜ್ಞರು ಲಾಕ್‌ಡೌನ್ ಮುಂದುವರೆಸಲು ಒತ್ತಡ ಹೇರುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿ ಸರ್ವಪಕ್ಷದ ಸಭೆ ಕರೆದಿರುವುದು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.