ಕೊರೋನಾ ಅಟ್ಟಹಾಸಕ್ಕೆ ಮಹಾರಾಷ್ಟ್ರದಲ್ಲಿ ಒಂದೇ ದಿನ 12 ಬಲಿ..!
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಏಪ್ರಿಲ್ 14ರವರೆಗೆ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಇದರ ಹೊರತಾಗಿಯೂ ಕೊವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ಮಹಾರಾಷ್ಟ್ರದಲ್ಲೇ ಸೋಂಕು ಶರವೇಗದಲ್ಲಿ ಹರಡುತ್ತಿರುವುದು ಆತಂಕಕ್ಕೀಡು ಮಾಡಿದೆ.
ಮುಂಬೈ(ಏ.08): ಕೊರೋನಾ ರಣಕೇಕೆ ಮಹಾರಾಷ್ಟ್ರದಲ್ಲಿ ಹೆಚ್ಚುತ್ತಲೇ ಇದೆ. ಮಹಾರಾಷ್ಟ್ರವೊಂದರಲ್ಲೇ ಡೆಡ್ಲಿ ವೈರಸ್ ಕೊರೋನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಈ ಮೂಲಕ ಸಾವಿರ ಸೋಂಕಿತರ ಗಡಿ ದಾಟಿದ ದೇಶದ ಮೊದಲ ರಾಜ್ಯ ಎನ್ನುವ ಕುಖ್ಯಾತಿಗೆ ಮಹಾರಾಷ್ಟ್ರ ಪಾತ್ರವಾಗಿದೆ.
ಕೊರೋನಾ ಸಂಕಷ್ಟ: ಸರ್ವ ಪಕ್ಷ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಏಪ್ರಿಲ್ 14ರವರೆಗೆ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಇದರ ಹೊರತಾಗಿಯೂ ಕೊವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.
WHO ವಿರುದ್ಧ ತಿರುಗಿ ಬಿದ್ದ ಅಮೆರಿಕ, ಗಂಭೀರ ಆರೋಪ!
ಇನ್ನು ಆಘಾತಕಾರಿ ವಿಚಾರವೆಂದರೆ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ ಒಂದೇ ದಿನ 12 ಜನ ಪ್ರಾಣ ತೆತ್ತಿದ್ದಾರೆ. ಕ್ಷಣಕ್ಷಣಕ್ಕೂ ಮುಂಬೈನಲ್ಲಿ ಪರಿಸ್ಥಿತಿ ಹೇಗಾಗಿದೆ ಎನ್ನುವುದನ್ನು ನೀವೂ ನೋಡಿ.