Asianet Suvarna News Asianet Suvarna News

ಮಗನಿಂದ ತಾಯಿಗೆ ಹರಡಿದ ಡೆಡ್ಲಿ ಕೊರೋನಾ ಸೋಂಕು..!

ಕಲಬುರಗಿಯ 72 ವರ್ಷದ ವೃದ್ದೆಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಮಗನಿಂದ ತಾಯಿಗೆ ಸೋಂಕು ಹರಡಿರುವ ಆಘಾತಕಾರಿ ಮಾಹಿತಿ ಹೊರಬಂದಿದೆ. ಇದರೊಂದಿಗೆ ಕಲಬುರಗಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಕಲಬುರಗಿ(ಏ.08): ರಾಜ್ಯದಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಕಲಬುರಗಿಯಲ್ಲಿ ಮತ್ತೊಂದು ಕೋವಿಡ್ 19 ಸೋಂಕು ಪತ್ತೆಯಾಗಿದೆ.

ಕಲಬುರಗಿಯಲ್ಲಿ ಒಂದೇ ಕುಟುಂಬದ ಅತ್ತೆ-ಸೊಸೆಗೆ ಕೊರೋನಾ ಸೋಂಕು ದೃಢ..!

ಹೌದು, ಕಲಬುರಗಿಯ 72 ವರ್ಷದ ವೃದ್ದೆಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಮಗನಿಂದ ತಾಯಿಗೆ ಸೋಂಕು ಹರಡಿರುವ ಆಘಾತಕಾರಿ ಮಾಹಿತಿ ಹೊರಬಂದಿದೆ. ಇದರೊಂದಿಗೆ ಕಲಬುರಗಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 

"

ಮಂಗಳವಾರದವರೆಗೂ ಕಲಬುರಗಿಯಲ್ಲಿ 7 ಕೊರೋನಾ ವೈರಸ್ ಪ್ರಕರಣಗಳು ದೃಢಪಟ್ಟಿದ್ದವು. ಆದರೆ ಇಂದು ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.