Asianet Suvarna News Asianet Suvarna News

ಆರಂಭಿಕನಾಗಿ ಶತಕ ಚಚ್ಚಿದ ವಿರಾಟ್ ಕೊಹ್ಲಿ; ಮಾಧ್ಯಮದವರ ಪ್ರಶ್ನೆಗೆ ಕೆ ಎಲ್ ರಾಹುಲ್ ಗರಂ..!

ಏಷ್ಯಾಕಪ್ ಟೂರ್ನಿಯಲ್ಲಿ ಆಕರ್ಷಕ ಶತಕ ಚಚ್ಚಿದ ವಿರಾಟ್ ಕೊಹ್ಲಿ
ಆಫ್ಘಾನಿಸ್ತಾನ ಎದುರು ಆರಂಭಿಕನಾಗಿ ಕಣಕ್ಕಿಳಿದು ಅಜೇಯ ಶತಕ ಸಿಡಿಸಿದ ಕಿಂಗ್ ಕೊಹ್ಲಿ
ವಿರಾಟ್ ಕೊಹ್ಲಿ ಇನ್ಮುಂದೆ ಆರಂಭಿಕರಾಗಿಯೇ ಕಣಕ್ಕಿಳಿಯುತ್ತಾರೆಯೇ ಎನ್ನುವ ಪ್ರಶ್ನೆಗೆ ರಾಹುಲ್ ಗರಂ

Sep 9, 2022, 11:53 AM IST

ದುಬೈ(ಸೆ.09): ಏಷ್ಯಾಕಪ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ವಿರುದ್ದದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 1020 ದಿನಗಳ ಬಳಿಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಶತಕ ಸಿಡಿಸಿ ಮಿಂಚಿದ್ದಾರೆ. ಇದರ ಬೆನ್ನಲ್ಲೇ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕನ್ನಡಿಗ ಕೆ ಎಲ್ ರಾಹುಲ್ ಗರಂ ಆಗಿ ಪ್ರತಿಕ್ರಿಯೆ ನೀಡಿದ್ದಾರೆ

ಆಫ್ಘಾನಿಸ್ತಾನ ಎದುರಿನ ಪಂದ್ಯದ ವೇಳೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ ಎಲ್ ರಾಹುಲ್ ಟೀಂ ಇಂಡಿಯಾ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು. ಪಂದ್ಯ ಮುಕ್ತಾಯದ ಬಳಿಕ ಸುದ್ದಿಗೋಷ್ಟಿಯಲ್ಲಿ ಪಾಲ್ಗೊಂಡಾಗ, ಪತ್ರಕರ್ತರೊಬ್ಬರು, ವಿರಾಟ್ ಕೊಹ್ಲಿ, ಐಪಿಎಲ್‌ನಲ್ಲಿ 5 ಶತಕ ಸಿಡಿಸಿದ್ದಾರೆ. ಐದು ಬಾರಿಯೂ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ ಎಂದು ಹೇಳಿದಾಗ, ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್, ಆದರೇನಂತೆ? ಹಾಗಿದ್ರೆ ನಾನು ಹೊರಗೆ ಕುಳಿತುಕೊಳ್ಳಬೇಕಾ ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ರಾಹುಲ್, ವಿರಾಟ್ ಕೊಹ್ಲಿ ಲಯ ಕಂಡುಕೊಂಡಿದ್ದು, ತಂಡದ ಪಾಲಿಗೆ ಒಳ್ಳೆಯ ಬೆಳವಣಿಗೆ. ಅವರು ಮೂರನೇ ಕ್ರಮಾಂಕದಲ್ಲಿಯೂ ಉತ್ತಮವಾಗಿ ರನ್ ಗಳಿಸಿದ್ದಾರೆ ಎಂದು  ಕೆ ಎಲ್ ರಾಹುಲ್ ಹೇಳಿದ್ದಾರೆ. ಕೆ ಎಲ್ ರಾಹುಲ್ ನಡೆಸಿದ ಸಂಪೂರ್ಣ ಸುದ್ದಿಗೋಷ್ಟಿ ಹೀಗಿತ್ತು ನೋಡಿ..