
Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
ಏಷ್ಯಾಕಪ್‌ನಲ್ಲಿ ಯುಎಇ ವಿರುದ್ಧ ಭಾರತ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಸಂಜು ಸ್ಯಾಮ್ಸನ್‌ಗೆ ತಂಡದಲ್ಲಿ ಸ್ಥಾನ ನೀಡುವ ಮೂಲಕ ನಾಯಕ ಸೂರ್ಯಕುಮಾರ್ ಯಾದವ್ ಕೆಲ ಗಾಸಿಪ್‌ಗಳಿಗೆ ಬ್ರೇಕ್ ಹಾಕಿದ್ದಾರೆ. ಮುಂಬರುವ ಪಂದ್ಯಗಳಲ್ಲಿ ಸಂಜು ತಮ್ಮ ಅವಕಾಶವನ್ನು ಹೇಗೆ ಬಳಸಿಕೊಳ್ಳುತ್ತಾರೆ ಕಾದು ನೋಡಬೇಕಿದೆ.
ಬೆಂಗಳೂರು: ನಿರೀಕ್ಷೆಯಂತೆಯೇ ಏಷ್ಯಾಕಪ್ ಟೂರ್ನಿಯಲ್ಲಿ ಹಾಲಿಚಾಂಪಿಯನ್ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಯುಎಇ ಎದುರು ಭಾರತ 9 ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಮೊದಲಿಗೆ ಯುಎಇ ತಂಡವನ್ನು 57 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ, ಕೇವಲ 25 ಎಸೆತಗಳನ್ನು ಎದುರಿಸಿ ಒಂದು ವಿಕೆಟ್ ಕಳೆದುಕೊಂಡು ಗೆದ್ದು ಬೀಗಿದೆ. ಇನ್ನು ಇದೆಲ್ಲದರ ನಡುವೆ ಮೊದಲ ಪಂದ್ಯದಲ್ಲೇ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಕೆಲ ಗಾಸಿಫ್‌ಗಳಿಗೆ ಬ್ರೇಕ್ ಹಾಕಿದ್ದಾರೆ.
ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಆಯ್ಕೆ ಮಾಡಿದಾಗಿನಿಂದಲೂ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರಾಗಲಿದ್ದಾರೆ ಎನ್ನುವ ಚರ್ಚೆ ನಡೀತಾನೆ ಇತ್ತು. ಅದರಲ್ಲೂ ಗಿಲ್ ತಂಡ ಸೇರ್ಪಡೆ ಬಳಿಕ ಸಂಜು ಕೆರಿಯರ್ ಟಿ20 ಕ್ರಿಕೆಟ್‌ನಲ್ಲಿ ಮುಗಿದೇ ಹೋಯ್ತು ಅಂತ ಕ್ರಿಕೆಟ್ ಪಂಡಿತರು ಷರಾ ಬರಿಯಲಾರಂಭಿಸಿದ್ರು. ಆದರೆ ಸೂರ್ಯ, ಸಂಜುಗೆ ತಂಡದಲ್ಲಿ ಸ್ಥಾನ ನೀಡುವ ಮೂಲಕ ಕ್ರಿಕೆಟ್ ಪಂಡಿತರ ಲೆಕ್ಕಾಚಾರ ತಲೆಕೆಳಗೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಯುಎಇ ವಿರುದ್ದ ಸಂಜುಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲ್ಲಿಲ್ಲ, ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಸಿಕ್ಕ ಅವಕಾಶವನ್ನು ಸಂಜು ಹೇಗೆ ಬಳಸಿಕೊಳ್ತಾರೆ ಕಾದು ನೋಡ್ಬೇಕು.
ಇನ್ನು 2026ರ ಟಿ20 ವಿಶ್ವಕಪ್‌ನಲ್ಲಿ ಅಭಿಷೇಕ್ ಶರ್ಮಾ ಜತೆ ಶುಭ್‌ಮನ್ ಗಿಲ್ ಓಪನ್ನರ್ ಆಗಿ ಕಣಕ್ಕಿಳಿಯೋದು ಬಹುತೇಕ ಕನ್ಫರ್ಮ್ ಆಗಿದೆ. ಈ ಹಿಂದೆ ಪಂಜಾಬ್ ಅಭಿಷೇಕ್ ಗಿಲ್ ಓಪನ್ನರ್ ಆಗಿ ಮಿಂಚಿದ್ರು, ಇದೀಗ ಭಾರತ ಪರ ಕೂಡಾ ಟಿ20 ಕ್ರಿಕೆಟ್‌ನಲ್ಲಿ ಮುಂದಿನ ಟಿ20 ವಿಶ್ವಕಪ್ ಆಡುವ ಸ್ಪಷ್ಟ ಸಂದೇಶ ಸಿಕ್ಕಿದೆ.