ಫೆಬ್ರವರಿ 9ರಂದು BGS ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಉದ್ಘಾಟನೆ
ಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ 76ನೇ ಜನ್ಮದಿನೋತ್ಸವದ ಅಂಗವಾಗಿ 09ರಂದು ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಮೈದಾನವನ್ನು ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಬೆಂಗಳೂರು(ಫೆ.05): ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಸುಸಜ್ಜಿತ 80 ಯಾರ್ಡ್ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನವನ್ನು ನಿರ್ಮಿಸಲಾಗಿದ್ದು, ಫೆಬ್ರವರಿ 09ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಕ್ರಿಕೆಟ್ ಮೈದಾನವನ್ನು ಉದ್ಘಾಟಿಸಲಿದ್ದಾರೆ.
ಈ ಕುರಿತಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಇಂದು ಸುದ್ದಿಘೋಷ್ಟಿ ನಡೆಸಿ ಮಾಹಿತಿ ನೀಡಿದರು. ಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ 76ನೇ ಜನ್ಮದಿನೋತ್ಸವದ ಅಂಗವಾಗಿ 09ರಂದು ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಮೈದಾನವನ್ನು ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ನಿಶ್ಚಿತಾರ್ಥ ಮಾಡಿಕೊಂಡ ಐಪಿಎಲ್ ಹೀರೋ ರಾಹುಲ್ ತೆವಾಟಿಯಾ; ಸ್ಟಾರ್ ಆಟಗಾರರು ಭಾಗಿ
ಕುಂಬಳಗೋಡಿನಲ್ಲಿ ನಿರ್ಮಾಣವಾಗಿರು ಈ ಕ್ರಿಕೆಟ್ ಸ್ಟೇಡಿಯಂನಲ್ಲಿ 10 ವರ್ಷದಿಂದ 14 ವರ್ಷದ ಮಕ್ಕಳು ಕ್ರಿಕೆಟ್ ಕೋಚಿಂಗ್ ಪಡೆಯಬಹುದು. ಈ ಮೈದಾನ ಉದ್ಘಾಟನೆಯ ಸಂದರ್ಭದಲ್ಲಿ ನಾಡಿನ ಸಮಸ್ತ ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕರೆಯೋಲೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.