Asianet Suvarna News Asianet Suvarna News

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಆರೆಸ್ಟ್ ಆಗಿದ್ದೇಕೆ..?

Oct 18, 2021, 11:34 AM IST

ಹರ್ಯಾಣ(ಅ.18): ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ (Yuvraj Singh) ಜಾತಿ ನಿಂದನೆ ಮಾಡಿದ ಆರೋಪದಡಿ, ಹರ್ಯಾಣ ಪೊಲೀಸರಿಂದ ಬಂಧನಕ್ಕೆ ಒಳಗಾಗಿ, ಆನಂತರ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.

ಜಾತಿ ನಿಂದನೆ ಮಾಡಿದ ಆರೋಪದಡಿ 39 ವರ್ಷದ ಯುವರಾಜ್ ಸಿಂಗ್ ಅವರನ್ನು ಬಂಧಿಸಿ, ಮೂರು ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 2020ರ ಜೂನ್‌ನಲ್ಲಿ ಸಹ ಆಟಗಾರ ರೋಹಿತ್ ಶರ್ಮಾ (Rohit Sharma) ಜತೆ ಇನ್‌ಸ್ಟಾಗ್ರಾಂ ಲೈವ್‌ (Instagram Live) ನಲ್ಲಿ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ (Yuzvendra Chahal) ಅವರ ಜಾತಿ ನಿಂದನೆ ಮಾಡಿದ್ದರು.

T20 World Cup: ಅಭ್ಯಾಸ ಪಂದ್ಯದಲ್ಲಿಂದು ಟೀಂ ಇಂಡಿಯಾಗೆ ಇಂಗ್ಲೆಂಡ್ ಸವಾಲು..!

ಇದಾದ ಬಳಿಕ ಯುವಿ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಚಾರ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಯುವಿ ಟ್ವಿಟರ್‌ನಲ್ಲಿ ಕ್ಷಮೆ ಯಾಚಿಸಿದ್ದರು. ಇದರ ಹೊರತಾಗಿಯೂ ರಜನ್‌ ಕಲ್ಸನ್‌ ಎಂಬುವವರು ದೂರು ನೀಡಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.