Asianet Suvarna News Asianet Suvarna News

ಕೊರೋನಾ ವಿರುದ್ಧ ತೊಡೆ ತಟ್ಟಿದ ಕ್ರಿಕೆಟರ್ಸ್..!

ಕೋವಿಡ್ 19 ಸೋಂಕಿನಿಂದಾಗಿ ಈಗಾಗಲೇ ಹಲವು ಕ್ರಿಕೆಟ್ ಟೂರ್ನಿಗಳು ರದ್ದಾಗಿವೆ. ಭಾರತ-ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ-ನ್ಯೂಜಿಲೆಂಡ್ ನಡುವೆ ನಡೆಯಬೇಕಿದ್ದ ಏಕದಿನ ಸರಣಿಗಳು ಅರ್ಧಕ್ಕೆ ರದ್ದಾಗಿವೆ. ಇನ್ನು ಪಾಕಿಸ್ತಾನ ಸೂಪರ್ ಲೀಗ್ ಸೆಮಿಫೈನಲ್ ಪಂದ್ಯಗಳು ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳು ಮುಂದೂಡಲ್ಪಟ್ಟಿವೆ.

First Published Mar 18, 2020, 6:53 PM IST | Last Updated Mar 18, 2020, 6:53 PM IST

ಬೆಂಗಳೂರು(ಮಾ.18): ಕೊರೋನಾ ಎನ್ನುವ ಮೂರಕ್ಷರದ ಮಹಾಮಾರಿ ಇಡೀ ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಇದಕ್ಕೆ ಕ್ರಿಕೆಟ್ ಕ್ಷೇತ್ರವೂ ಹೊರತಾಗಿಲ್ಲ. ಹೀಗಾಗಿ ಕೆಲ ಕ್ರಿಕೆಟಿಗರು ದೇಶದ ಜನರಿಗೆ ಎಚ್ಚರಿಯ ಸಂದೇಶವನ್ನು ರವಾನಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟಿಗನಿಗೂ ತಟ್ಟಿದ ಕೊರೋನಾ ಶಾಕ್..!

ಹೌದು, ಕೋವಿಡ್ 19 ಸೋಂಕಿನಿಂದಾಗಿ ಈಗಾಗಲೇ ಹಲವು ಕ್ರಿಕೆಟ್ ಟೂರ್ನಿಗಳು ರದ್ದಾಗಿವೆ. ಭಾರತ-ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ-ನ್ಯೂಜಿಲೆಂಡ್ ನಡುವೆ ನಡೆಯಬೇಕಿದ್ದ ಏಕದಿನ ಸರಣಿಗಳು ಅರ್ಧಕ್ಕೆ ರದ್ದಾಗಿವೆ. ಇನ್ನು ಪಾಕಿಸ್ತಾನ ಸೂಪರ್ ಲೀಗ್ ಸೆಮಿಫೈನಲ್ ಪಂದ್ಯಗಳು ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳು ಮುಂದೂಡಲ್ಪಟ್ಟಿವೆ.

ಐಪಿಎಲ್‌ ನಡೆಯದಿದ್ದರೆ ಏನಾಗಲಿದೆ ಧೋನಿ ಭವಿಷ್ಯ?

ಇದೀಗ ಕ್ರಿಕೆಟಿಗರು ಮಾರಣಾಂತಿಕ ವೈರಸ್ ಎದುರು ತೊಡೆ ತಟ್ಟಿದ್ದಾರೆ. ಮಾತ್ರವಲ್ಲದೇ ಜನರನ್ನು ಎಚ್ಚರಿಸುವಂತಹ ಕೆಲಸ ಮಾಡಿದ್ದಾರೆ. ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ ಹಾಗೂ ಪಾಕಿಸ್ತಾನದ ಮಾಜಿ ವೇಗಿ ಶೊಯೆಬ್ ಅಖ್ತರ್ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

Video Top Stories