Asianet Suvarna News Asianet Suvarna News

ಟೀಂ ಇಂಡಿಯಾ ಡೆತ್ ಓವರ್ ಬೌಲಿಂಗ್‌ ಬಗ್ಗೆ ಗಮನ ಹರಿಸಲಿ: ಇರ್ಫಾನ್ ಪಠಾಣ್

* ಭಾರತ-ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೂ ಮುನ್ನ ಇರ್ಫಾನ್ ಪಠಾಣ್‌ ಸಂದರ್ಶನ
* ಏಷ್ಯಾನೆಟ್ ನ್ಯೂಸ್‌ ಜತೆ ಮನಬಿಚ್ಚಿ ಮಾತನಾಡಿದ ಮಾಜಿ ಕ್ರಿಕೆಟಿಗ
* ದೇಶಿ ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
* ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಸಜ್ಜಾಗಿದ್ದು, ಡೆತ್ ಓವರ್‌ ಬಗ್ಗೆ ಗಮನ ನೀಡಬೇಕಿದೆ

ತಿರುವನಂತಪುರಂ(ಸೆ.28): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವಿಂದು ಇಲ್ಲಿನ ಗ್ರೀನ್‌ಫೀಲ್ಡ್‌ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಆರಂಭಕ್ಕೂ ಮುಂಚೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್‌ ಪಠಾಣ್ ಏಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್‌ ಜತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ.

ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಈ ಸರಣಿಯು ಸಾಕಷ್ಟು ಮಹತ್ವದ್ದಾಗಿದೆ. ಟೀಂ ಇಂಡಿಯಾ ಅಗ್ರ ಹಾಗೂ ಮಧ್ಯಮ ಕ್ರಮಾಂಕ ಸೆಟ್ ಆಗಿದ್ದು, ಬೌಲಿಂಗ್ ವಿಭಾಗ ಅದರಲ್ಲೂ ಡೆತ್ ಓವರ್ ಬೌಲಿಂಗ್ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಪಠಾಣ್ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ..