ICC T20 World Cup Ind vs Pak ಬೆಟ್ಟಿಂಗ್ ದಂಧೆಯ ಮೇಲೆ ಹದ್ದಿನ ಕಣ್ಣಿಟ್ಟಿದೆ CCB..!

 ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ದುಬೈನಲ್ಲಿಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಬೆಟ್ಟಿಂಗ್ ನಡೆಸುವ ಬುಕ್ಕಿಗಳ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಐಪಿಎಲ್‌ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರನ್ನು 20 ಕೇಸ್‌ಗಳಲ್ಲಿ 27 ಬುಕ್ಕಿಗಳನ್ನು ಬಂಧಿಸಲಾಗಿತ್ತು. 

First Published Oct 24, 2021, 11:54 AM IST | Last Updated Oct 24, 2021, 11:54 AM IST

ಬೆಂಗಳೂರು(ಅ.24): ಭಾರತ ಹಾಗೂ ಪಾಕಿಸ್ತಾನ (Ind vs Pak) ನಡುವಿನ ಕ್ರಿಕೆಟ್ ಪಂದ್ಯ (Cricket Match) ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆದರೂ ಆ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿರುತ್ತಾರೆ. ಅದರಲ್ಲೂ ವಿಶ್ವಕಪ್‌ ಪಂದ್ಯಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾದಾಗಲಂತೂ ಅದರ ಕ್ರೇಜ್ ಮತ್ತಷ್ಟು ಹೆಚ್ಚಾಗಿಯೇ ಇರುತ್ತದೆ. ಇನ್ನು ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಬೆಟ್ಟಿಂಗ್ ಭರಾಟೆ ಕೂಡಾ ಜೋರಾಗಿಯೇ ನಡೆಯುತ್ತದೆ.

ಇದೀಗ ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿಯಲ್ಲಿ ದುಬೈನಲ್ಲಿಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಬೆಟ್ಟಿಂಗ್ ನಡೆಸುವ ಬುಕ್ಕಿಗಳ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು (CCB Police) ಹದ್ದಿನ ಕಣ್ಣಿಟ್ಟಿದ್ದಾರೆ. ಐಪಿಎಲ್‌ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರನ್ನು 20 ಕೇಸ್‌ಗಳಲ್ಲಿ 27 ಬುಕ್ಕಿಗಳನ್ನು ಬಂಧಿಸಲಾಗಿತ್ತು. 

T20 World Cup Ind vs Pak ಟೀಂ ಇಂಡಿಯಾವನ್ನು ಗೆಲ್ಲಿಸ್ತಾರಾ ಮೆಂಟರ್ ಧೋನಿ..?

ಬೆಟ್ಟಿಂಗ್ (Betting) ದಂಧೆಗೆ ಬ್ರೇಕ್‌ ಹಾಕಲು ಬೆಂಗಳೂರು ಸಿಸಿಬಿ ಪೊಲೀಸರು ಹಳೆಯ ಬುಕ್ಕಿಗಳು, ಬೆಟ್ಟಿಂಗ್ ಏಜೆಂಟರ್‌ಗಳ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ