ಇಲ್ಲಿದೆ ನೋಡಿ ಇಂಡೋ-ಕಿವೀಸ್ ಮೊದಲ ಟಿ20 ಮ್ಯಾಚ್ ಹೈಲೈಟ್ಸ್‌

ಮುಂಬರುವ ಟಿ20 ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾ, ಕಿವೀಸ್ ವಿರುದ್ಧ ಅದ್ಭುತ ಪ್ರದರ್ಶನವನ್ನೇ ತೋರಿತು. ಟಾಸ್ ಗೆದ್ದು ಮೊದಲು ಫಿಲ್ಡಿಂಗ್ ಆಯ್ದುಕೊಂಡ ಭಾರತ, ನ್ಯೂಜಿಲೆಂಡ್ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.

Share this Video
  • FB
  • Linkdin
  • Whatsapp

ಆಕ್ಲೆಂಡ್(ಜ.25): ಟೀಂ ಇಂಡಿಯಾ ಕಿವೀಸ್ ವಿರುದ್ಧ ಮೊದಲ ಟಿ20 ಪಂದ್ಯವನ್ನು ರೋಚಕವಾಗಿ ಜಯಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವಿರಾಟ್ ಪಡೆ 1-0 ಮುನ್ನಡೆ ಸಾಧಿಸಿದೆ.

204 ರನ್ ಚೇಸ್ ಮಾಡಿ ದಾಖಲೆ; ಟೀಂ ಇಂಡಿಯಾಗೆ ಯಾರೂ ಇಲ್ಲ ಸರಿಸಾಟಿ!

ಮುಂಬರುವ ಟಿ20 ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾ, ಕಿವೀಸ್ ವಿರುದ್ಧ ಅದ್ಭುತ ಪ್ರದರ್ಶನವನ್ನೇ ತೋರಿತು. ಟಾಸ್ ಗೆದ್ದು ಮೊದಲು ಫಿಲ್ಡಿಂಗ್ ಆಯ್ದುಕೊಂಡ ಭಾರತ, ನ್ಯೂಜಿಲೆಂಡ್ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.

ಇಂಡೋ-ಕಿವೀಸ್ ಟಿ20: ರೋಚಕ ಜಯ ಸಾಧಿಸಿದ ಟೀಂ ಇಂಡಿಯಾ

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಕಾಲಿನ್ ಮನ್ರೋ, ಕೇನ್ ವಿಲಿಯಮ್ಸನ್ ಹಾಗೂ ರಾಸ್ ಟೇಲರ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ 203 ರನ್ ಬಾರಿಸಿತ್ತು. ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಕೆ.ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಆಕರ್ಷಕ ಅರ್ಧಶತಕಗಳ ನೆರವಿನಿಂದ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತ್ತು. ಈ ಪಂದ್ಯದ ಹೈಲೈಟ್ಸ್ ಇಲ್ಲಿದೆ ನೋಡಿ

Related Video