ಇಲ್ಲಿದೆ ನೋಡಿ ಇಂಡೋ-ಕಿವೀಸ್ 2ನೇ ಟಿ20 ಪಂದ್ಯದ ಹೈಲೈಟ್ಸ್

ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು ಕೇವಲ 132 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತ್ತು. ಟೀಂ ಇಂಡಿಯಾ ಸಂಘಟಿತ ಬೌಲಿಂಗ್ ಪ್ರದರ್ಶನದೆದುರು ಕಿವೀಸ್ ಪಡೆ ರನ್‌ಗಳಿಸಲು ಪರದಾಡಿತು.

Share this Video
  • FB
  • Linkdin
  • Whatsapp

ಆಕ್ಲೆಂಡ್(ಜ.27): ಭಾರತ-ನ್ಯೂಜಿಲೆಂಡ್‌ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ದಾಖಲಿಸಿದೆ. ಆಕ್ಲೆಂಡ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭವಾಗಿ ಗೆಲುವಿನ ನಗೆ ಬೀರಿದೆ.

ವಿಶ್ವಕಪ್‌ನಲ್ಲಿ ಭಾಗವಹಿಸಲ್ಲ ಎಂದ ಪಿಸಿಬಿ ಯು ಟರ್ನ್

ಹೌದು, ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು ಕೇವಲ 132 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತ್ತು. ಟೀಂ ಇಂಡಿಯಾ ಸಂಘಟಿತ ಬೌಲಿಂಗ್ ಪ್ರದರ್ಶನದೆದುರು ಕಿವೀಸ್ ಪಡೆ ರನ್‌ಗಳಿಸಲು ಪರದಾಡಿತು.

ಗಣರಾಜ್ಯೋತ್ಸವಕ್ಕೆ ಗೆಲುವಿನ ಉಡುಗೊರೆ ನೀಡಿದ ಟೀಂ ಇಂಡಿಯಾ

ಇನ್ನು ಸುಲಭ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿತಾದರೂ, ಆ ಬಳಿಕ ಕೆ.ಎಲ್. ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಆಕರ್ಷಕ ಜತೆಯಾಟದ ನೆರವಿನಿಂದ ತಂಡವನ್ನು ಗೆಲುವಿನ ದಡ ಸೇರಿಸಿದರು. ಎರಡನೇ ಟಿ20 ಪಂದ್ಯದ ಹೈಲೈಟ್ಸ್ ಇಲ್ಲಿದೆ ನೋಡಿ...

Related Video