Asianet Suvarna News Asianet Suvarna News

ಕಿವೀಸ್ ಕಿವಿ ಹಿಂಡಲು ಹೈದಾರಾಬಾದ್‌ಗೆ ಬಂದಿಳಿದ ಟೀಂ ಇಂಡಿಯಾ..!

ಭಾರತ-ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಗೆ ಕ್ಷಣಗಣನೆ
ಜನವರಿ 18ರಿಂದ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿ
ಮೊದಲ ಏಕದಿನ ಪಂದ್ಯಕ್ಕೆ ಹೈದರಾಬಾದ್‌ನ ರಾಜೀವ್ ಗಾಂಧಿ ಮೈದಾನ ಆತಿಥ್ಯ
 

ಹೈದರಾಬಾದ್‌(ಜ.17): ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಜನವರಿ 18ರಿಂದ ಆರಂಭವಾಗಲಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇದೀಗ ಹೈದರಾಬಾದ್‌ಗೆ ಬಂದಿಳಿದಿದೆ. ಇಂಡೋ-ಕಿವೀಸ್ ಮೊದಲ ಏಕದಿನ ಪಂದ್ಯಕ್ಕೆ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ.

ಶ್ರೀಲಂಕಾ ಎದುರಿನ ಕೊನೆಯ ಏಕದಿನ ಪಂದ್ಯವನ್ನಾಡಿ, ತಿರುವನಂತಪುರಂನಿಂದ ಟೀಂ ಇಂಡಿಯಾ ಆಟಗಾರರು ಇದೀಗ ಹೈದರಾಬಾದ್‌ಗೆ ಬಂದಿಳಿದಿದ್ದಾರೆ. ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್ ಅವರು ಏರ್‌ಪೋರ್ಟ್‌ನಿಂದ ಟೀಂ ಬಸ್‌ ಏರುವ ಮುನ್ನ ಬಿಗಿ ಭದ್ರತೆಯೊಂದಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

Video Top Stories