ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಕ್ಷಣಗಣನೆ
144 ವರ್ಷಗಳ ಟೆಸ್ಟ್ ಇತಿಹಾಸ ವಿರುವ ಟೆಸ್ಟ್ ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯುತ್ತಿದೆ. ಎರಡು ಬಲಿಷ್ಠ ತಂಡಗಳು ಪ್ರಶಸ್ತಿಗಾಗಿ ಕಾದಾಡುವುದರಿಂದ ಫೈನಲ್ ಪಂದ್ಯ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ.
ಸೌಥಾಂಪ್ಟನ್(ಜೂ.18): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಕ್ಷಣಗಣನೆ ಆರಂಭವಾಗಿದ್ದು, ಸೌಥಾಂಪ್ಟನ್‌ನಲ್ಲಿ ಉಭಯ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.
144 ವರ್ಷಗಳ ಟೆಸ್ಟ್ ಇತಿಹಾಸ ವಿರುವ ಟೆಸ್ಟ್ ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯುತ್ತಿದೆ. ಎರಡು ಬಲಿಷ್ಠ ತಂಡಗಳು ಪ್ರಶಸ್ತಿಗಾಗಿ ಕಾದಾಡುವುದರಿಂದ ಫೈನಲ್ ಪಂದ್ಯ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಟೆಸ್ಟ್ ಕ್ರಿಕೆಟ್‌ಗೆ ಯಾರು ಬಾಸ್..?
ಒಂದು ಕಡೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಪಂತ್, ಅಶ್ವಿನ್ ಹಾಗೂ ಪೂಜಾರನ್ನೊಳಗೊಂಡ ಭಾರತ ತಂಡ ಪ್ರಶಸ್ತಿ ಗೆಲ್ಲುವ ಫೇವರೆಟ್ ಎನಿಸಿಕೊಂಡಿದ್ದರೆ, ಮತ್ತೊಂದೆಡೆ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಅವರ ತವರಿನಲ್ಲಿ ಸೋಲಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಈ ಟೆಸ್ಟ್ ಫೈನಲ್‌ನ ಒಂದು ರಿಪೋರ್ಟ್ ಇಲ್ಲಿದೆ ನೋಡಿ.