Asianet Suvarna News Asianet Suvarna News

IPL 2021: CSK ವಿರುದ್ದದ ಪಂದ್ಯಕ್ಕೂ ಮುನ್ನ ಭರ್ಜರಿ ವರ್ಕೌಟ್‌ ಮಾಡಿದ ವಿರಾಟ್ ಕೊಹ್ಲಿ..!

Sep 24, 2021, 6:18 PM IST

ಶಾರ್ಜಾ(ಸೆ.24): 14ನೇ ಆವೃತ್ತಿಯ ಐಪಿಎಲ್(IPL 2021) ಟೂರ್ನಿಯ 35ನೇ ಪಂದ್ಯದಲ್ಲಿಂದು ಮೂರು ಬಾರಿಯ ಐಪಿಎಲ್ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್‌(CSK) ತಂಡವಿಂದು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.

ಫ್ಲೇ ಆಫ್‌ಗೇರುವ ನಿಟ್ಟಿನಲ್ಲಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಾಲಿಗೆ ಈ ಪಂದ್ಯ ಸಾಕಷ್ಟು ಮಹತ್ವದ್ದಾಗಿದೆ. ಇದೇ ವೇಳೆ ಮಹತ್ವದ ಪಂದ್ಯಕ್ಕೂ ಮುನ್ನ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ(Virat Kohli) ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ವರ್ಕೌಟ್‌ ಮಾಡುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟಯ ವೈರಲ್‌ ಆಗಿದೆ. ಎರಡೂ ಕೈನಲ್ಲಿ ಡಂಬಲ್ಸ್‌ ಹಿಡಿದು ಒಂದೇ ಕಾಲಿನಲ್ಲಿ ನಿಂತು ಸ್ಕಾಟ್‌ ಮಾಡುತ್ತಿರುವ ವಿಡಿಯೋ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. 

IPL 2021: ಆರ್‌ಸಿಬಿ ವರ್ಸಸ್‌ ಸಿಎಸ್‌ಕೆ ಪಂದ್ಯದಲ್ಲಿ ಈ ತಂಡ ಗೆಲ್ಲಲಿದೆ: ಸಂಜಯ್ ಮಂಜ್ರೇಕರ್ ಭವಿಷ್ಯ..!

ಟೀಂ ಇಂಡಿಯಾ(Team India) ನಾಯಕ ವಿರಾಟ್ ಕೊಹ್ಲಿ ಅವಕಾಶ ಸಿಕ್ಕಾಗಲೆಲ್ಲಾ ತಮ್ಮ ವರ್ಕೌಟ್‌ ಮಾಡುವ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಮುಂಬರುವ ಟಿ20 ವಿಶ್ವಕಪ್(T20 World Cup) ಟೂರ್ನಿ ಮುಕ್ತಾಯದ ಬಳಿಕ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ. ಇದೇ ವೇಳೆ 14ನೇ ಆವೃತ್ತಿಯ ಐಪಿಎಲ್ ಮುಕ್ತಾಯದ ಬಳಿಕ ಆರ್‌ಸಿಬಿ ತಂಡದ ನಾಯಕತ್ವದಿಂದಲೂ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ.