RCB vs CSK: IPL ಟಿಕೆಟ್‌ಗಾಗಿ ಚಿನ್ನಸ್ವಾಮಿ ಸ್ಟೇಡಿಯಂನತ್ತ ಮುಗಿಬಿದ್ದ ಫ್ಯಾನ್ಸ್‌ಗೆ ನಿರಾಸೆ

ಏಪ್ರಿಲ್‌ 17ರಂದು ಆರ್‌ಸಿಬಿ-ಚೆನ್ನೈ ಸೂಪರ್ ಕಿಂಗ್ಸ್‌ ಹೈವೋಲ್ಟೇಜ್ ಪಂದ್ಯ 
ಟಿಕೆಟ್ ಖರೀದಿಸಲು ಬೆಂಗಳೂರಿನ ಚಿನ್ನಸ್ವಾಮಿ ಮೈದಾನಕ್ಕೆ ಬಂದ ಫ್ಯಾನ್ಸ್‌
ಇಂದು ಟಿಕೆಟ್ ನೀಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ವೈರಲ್
ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ ಎನ್ನುತ್ತಿರುವ ಮ್ಯಾನೇಜ್ಮೆಂಟ್
ಈಗ ಟೆಕೆಟ್ ಇಲ್ಲ ಎಂಬ ವಿಷಯ ತಿಳಿದು ಅಭಿಮಾನಗಳ ಆಕ್ರೋಶ
 

Share this Video
  • FB
  • Linkdin
  • Whatsapp

ಬೆಂಗಳೂರು(16): 16ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯ ಟೂರ್ನಿಯ ಬಹುನಿರೀಕ್ಷಿತ ಪಂದ್ಯವಾದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ನಡುವಿನ ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಏಪ್ರಿಲ್ 17ರಂದು ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಇಂದು ಟಿಕೆಟ್ ನೀಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಟಿಕೆಟ್ ಖರೀದಿಸಲು ಚಿನ್ನಸ್ವಾಮಿ ಮೈದಾನಕ್ಕೆ ಆಗಮಿಸಿದ್ದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video