Asianet Suvarna News Asianet Suvarna News

ಐಪಿಎಲ್‌ ಸಮರಕ್ಕೆ 10 ತಂಡಗಳು ಸಿದ್ಧ; ಈ ಸಲ ಕಪ್ ಯಾರದ್ದು..?

16ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಕ್ಷಣಗಣನೆ
10 ತಂಡಗಳ ನಡುವೆ ಪ್ರಶಸ್ತಿಗಾಗಿ ಪೈಪೋಟಿ
ಉದ್ಘಾಟನಾ ಪಂದ್ಯದಲ್ಲಿ ಸಿಎಸ್‌ಕೆ-ಗುಜರಾತ್ ಫೈಟ್
ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿ ಆರ್‌ಸಿಬಿ

ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿ ಎನಿಸಿಕೊಂಡಿರುವ ಐಪಿಎಲ್ ಟೂರ್ನಿ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಇದೀಗ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಸೆಣಸಾಡಲಿದ್ದು, ಹೈವೋಲ್ಟೇಜ್ ಪಂದ್ಯಕ್ಕೆ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ.

ಇಂದಿನಿಂದ ಮೇ 28ರವರೆಗೆ 52 ದಿನಕಾಲ ನಡೆಯಲಿರುವ ಚುಟುಕು ಕ್ರಿಕೆಟ್ ಮಹಾಸಂಗ್ರಾಮದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಲಖನೌ ಸೂಪರ್ ಜೈಂಟ್ಸ್, ಗುಜರಾತ್ ಟೈಟಾನ್ಸ್ ರಾಜಸ್ಥಾನ ಸೇರಿದಂತೆ ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.

ಈ ಟೂರ್ನಿಯ ಒಂದು ಕ್ವಿಕ್ ಝಲಕ್ ಇಲ್ಲಿದೆ ನೋಡಿ