ಬೆಂಗಳೂರಿನಲ್ಲಿ ಕರ್ನಾಟಕ ವೆಟರ್ನರಿ ಪ್ರೀಮಿಯರ್ ಲೀಗ್‌ಗೆ ಚಾಲನೆ
ದಿನನಿತ್ಯ ಕೆಲಸದ ಒತ್ತಡದಲ್ಲಿ ಸದಾ ಬ್ಯುಸಿಯಾಗಿರುವ ವೆಟರ್ನರಿ ವೈದ್ಯರು ಹಾಗೂ ಸಿಬ್ಬಂದಿ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರಾರೆ. ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಪಶುಸಂಗೋಪನಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕರ್ನಾಟಕ ವೆಟರ್ನರಿ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಾಲ್ಗೊಂಡು ಕ್ರಿಕೆಟ್ ಆಡಿ ಖುಷಿಪಟ್ಟರು.
ಬೆಂಗಳೂರು(ಮಾ.13): ದಿನನಿತ್ಯ ಕೆಲಸದ ಒತ್ತಡದಲ್ಲಿ ಸದಾ ಬ್ಯುಸಿಯಾಗಿರುವ ವೆಟರ್ನರಿ ವೈದ್ಯರು ಹಾಗೂ ಸಿಬ್ಬಂದಿ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರಾರೆ. ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಪಶುಸಂಗೋಪನಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕರ್ನಾಟಕ ವೆಟರ್ನರಿ ಪ್ರೀಮಿಯರ್ ಲೀಗ್ (Karnataka Veterinary Premier League) ಟೂರ್ನಿಯಲ್ಲಿ ಪಾಲ್ಗೊಂಡು ಕ್ರಿಕೆಟ್ ಆಡಿ ಖುಷಿಪಟ್ಟರು.
ಹೆಬ್ಬಾಳ ವೆಟರ್ನರಿ ಕಾಲೇಜು ಮೈದಾನದಲ್ಲಿ ವೆಂಕಾಬ್ ಚಿಕನ್ ಸಂಸ್ಥೆಯ ಸಹಭಾಗಿತ್ವದಲ್ಲಿ ಆಯೋಜನೆಗೊಂಡಿದ್ದ ಕ್ರಿಕೆಟ್ ಟೂರ್ನಿಯಲ್ಲಿ, ಜಿಲ್ಲೆಯ ವಿವಿಧ ಭಾಗಗಳ ವೆಟರ್ನರಿ ಸಿಬ್ಬಂದಿ ಹಾಗೂ ವೈದ್ಯರು ಪಾಲ್ಗೊಂಡಿದ್ದರು. ಎರಡು ದಿನಗಳ ಕಾಲ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.