KPL ಮ್ಯಾಚ್ ಫಿಕ್ಸಿಂಗ್: RCB ಮಾಜಿ ಕ್ರಿಕೆಟಿಗ ಸೇರಿ ಇಬ್ಬರು ಸ್ಟಾರ್ ಆಟಗಾರರು ಅರೆಸ್ಟ್..!

ಕೆಪಿಎಲ್ ಟೂರ್ನಿ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಗೌತಮ್ ಹಾಗೂ ಖಾಜಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 2019ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗೌತಮ್ ನೇತೃತ್ವದ ಬಳ್ಳಾರಿ ಟಸ್ಕರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ತಂಡಗಳು ಫೈನಲ್ ಪ್ರವೇಶಿಸಿದ್ದವು. ವಿನಯ್ ನೇತೃತ್ವದ ಹುಬ್ಬಳ್ಳಿ ತಂಡ 8 ರನ್’ಗಳಿಂದ ಜಯ ಸಾಧಿಸಿತ್ತು.

First Published Nov 7, 2019, 9:29 AM IST | Last Updated Nov 7, 2019, 4:42 PM IST

ಬೆಂಗಳೂರು[ನ.07]: ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಕರ್ಮಕಾಂಡ ಇನ್ನಷ್ಟು ಬಯಲಾಗುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾಜಿ ಕ್ರಿಕೆಟಿಗ, ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿ.ಎಂ. ಗೌತಮ್ ಹಾಗೂ ಅಬ್ರಾರ್ ಖಾಜಿ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

KPL ಫಿಕ್ಸಿಂಗ್: ಇಬ್ಬರು ಕ್ರಿಕೆಟಿಗರು ಬಂಧನ..!

ಕೆಪಿಎಲ್ ಟೂರ್ನಿ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಗೌತಮ್ ಹಾಗೂ ಖಾಜಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 2019ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗೌತಮ್ ನೇತೃತ್ವದ ಬಳ್ಳಾರಿ ಟಸ್ಕರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ತಂಡಗಳು ಫೈನಲ್ ಪ್ರವೇಶಿಸಿದ್ದವು. ವಿನಯ್ ನೇತೃತ್ವದ ಹುಬ್ಬಳ್ಳಿ ತಂಡ 8 ರನ್’ಗಳಿಂದ ಜಯ ಸಾಧಿಸಿತ್ತು.

KPL ಫಿಕ್ಸಿಂಗ್; ನಾಲ್ವರು ಕ್ರಿಕೆಟಿಗರಿಗೆ CCB ಸಮನ್ಸ್!

ನವೆಂಬರ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿ.ಎಂ ಗೌತಮ್, ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರವಲ್ಲದೇ, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ತಂಡದಲ್ಲೂ ಕಾಣಿಸಿಕೊಂಡಿದ್ದರು. ಇದೀಗ ಗೌತಮ್ ಹಾಗೂ ಖಾಜಿ ಬಂಧನ ರಾಜ್ಯ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ

Video Top Stories