2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿದ್ದು ಹೇಗೆ..?

ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಇನ್ನೂರಕ್ಕೂ ಹೆಚ್ಚು ರನ್ ಬಿಟ್ಟುಕೊಟ್ಟಿದ್ದರು. ಬಳಿಕ ಬ್ಯಾಟ್ಸ್‌ಮನ್‌ಗಳ ಕೆಚ್ಚೆದೆಯ ನೆರವಿನಿಂದ ಟೀಂ ಇಂಡಿಯಾ ಸುಲಭ ಜಯ ದಾಖಲಿಸಿತ್ತು. 

First Published Jan 27, 2020, 5:01 PM IST | Last Updated Jan 27, 2020, 5:01 PM IST

ಆಕ್ಲೆಂಡ್(ಜ.27): ಟೀಂ ಇಂಡಿಯಾ ಆಕ್ಲೆಂಡ್‌ನ ಈಡನ್‌ ಪಾರ್ಕ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಪರ್ಫೆಕ್ಟ್ ಜಯ ಸಾಧಿಸಿದೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲದೇ ಫೀಲ್ಡಿಂಗ್‌ನಲ್ಲೂ ವಿರಾಟ್ ಪಡೆ ಅದ್ಭುತ ಪ್ರದರ್ಶನ ತೋರಿದೆ.

ವಿಕೆಟ್‌ ಕೀಪಿಂಗ್ ಬ್ಯಾಟ್ಸ್‌ಮನ್ ಆಗಿ ಯಾರೂ ಮಾಡದ ದಾಖಲೆ ನಿರ್ಮಿಸಿದ ಕೆ.ಎಲ್.ರಾಹುಲ್..!

ಹೌದು, ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಇನ್ನೂರಕ್ಕೂ ಹೆಚ್ಚು ರನ್ ಬಿಟ್ಟುಕೊಟ್ಟಿದ್ದರು. ಬಳಿಕ ಬ್ಯಾಟ್ಸ್‌ಮನ್‌ಗಳ ಕೆಚ್ಚೆದೆಯ ನೆರವಿನಿಂದ ಟೀಂ ಇಂಡಿಯಾ ಸುಲಭ ಜಯ ದಾಖಲಿಸಿತ್ತು. 

ಇಲ್ಲಿದೆ ನೋಡಿ ಇಂಡೋ-ಕಿವೀಸ್ 2ನೇ ಟಿ20 ಪಂದ್ಯದ ಹೈಲೈಟ್ಸ್

ಆದರೆ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸರ್ವತೋಮುಖ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.  ಟೀಂ ಇಂಡಿಯಾ ಎರಡನೇ ಟಿ20 ಪಂದ್ಯದಲ್ಲಿ ಗೆದ್ದಿದ್ದು ಹೇಗೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ...