ಇಂಡೋ-ಪಾಕ್ ಸರಣಿ ನಡೆಯದಿರಲು ಮೋದಿ ಕಾರಣವೆಂದ ಅಫ್ರಿದಿ..!

ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತ-ಪಾಕಿಸ್ತಾನ ನಡುವೆ 2012ರಿಂದೀಚೆಗೆ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಈಗಾಗಲೇ ಯುವರಾಜ್ ಸಿಂಗ್ ಹಾಗೂ ಅಫ್ರಿದಿ ಒಂದೇ ವೇದಿಕೆಯಲ್ಲಿ ಕ್ರಿಕೆಟ್ ಬೆಳವಣಿಗೆ ದೃಷ್ಟಿಯಿಂದ ಇಂಡೋ-ಪಾಕ್ ದ್ವಿಪಕ್ಷೀಯ ಸರಣಿ ನಡೆಯುವುದು ಒಳಿತು ಎಂದು ಹೇಳಿದ್ದರು.

First Published Feb 26, 2020, 1:50 PM IST | Last Updated Feb 26, 2020, 1:50 PM IST

ಕರಾಚಿ(ಫೆ.26): ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆದಿರುವುದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿಯೇ ಕಾರಣವೆಂದು ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹೀದ್ ಅಫ್ರಿದಿ ಗಂಭೀರ್ ಆರೋಪ ಮಾಡಿದ್ದಾರೆ.

ಏಷ್ಯಾಕಪ್‌ ಆತಿಥ್ಯ ಹಕ್ಕು ಬಿಟ್ಟುಕೊಡಲು ಪಾಕ್‌ ರೆಡಿ?

ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತ-ಪಾಕಿಸ್ತಾನ ನಡುವೆ 2012ರಿಂದೀಚೆಗೆ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಈಗಾಗಲೇ ಯುವರಾಜ್ ಸಿಂಗ್ ಹಾಗೂ ಅಫ್ರಿದಿ ಒಂದೇ ವೇದಿಕೆಯಲ್ಲಿ ಕ್ರಿಕೆಟ್ ಬೆಳವಣಿಗೆ ದೃಷ್ಟಿಯಿಂದ ಇಂಡೋ-ಪಾಕ್ ದ್ವಿಪಕ್ಷೀಯ ಸರಣಿ ನಡೆಯುವುದು ಒಳಿತು ಎಂದು ಹೇಳಿದ್ದರು.

ಇಂಡೋ-ಪಾಕ್ ದ್ವಿಪಕ್ಷೀಯ ಸರಣಿ ಪುನಾರಾರಂಭವಾಗಲಿ ಎಂದ ಯುವಿ

ಇದೀಗ ಅಫ್ರಿದಿ ಒಂದು ಹೆಜ್ಜೆ ಮುಂದೆ ಹೋಗಿ, ಮೋದಿ ಅಧಿಕಾರ ಕಳೆದುಕೊಂಡ ಬಳಿಕ ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಇದರ ಜತೆಗೆ ಐಪಿಎಲ್ ಬಗ್ಗೆಯೂ ಅಫ್ರಿದಿ ನೆಗೆಟಿವ್ ಕಮೆಂಟ್ ಮಾಡಿದ್ದಾರೆ. ಅಫ್ರಿದಿ ಏನಂದ್ರು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್