ತುಮಕೂರು: ಮೈಕ್ರೋಫೈನಾನ್ಸ್ ಕಾಟ ತಾಳಲಾರದೆ ಮಹಿಳೆ ಆತ್ಮಹತ್ಯೆ
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಸಾದಿಕ್ ಬೇಗಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಬಿ. ಕ್ರಾಸ್ ಕಲ್ಲುಶೆಟ್ಟಹಳ್ಳಿ ಬಳಿ ಮಹಿಳೆಯ ಶವ ಪತ್ತೆಯಾಗಿದೆ. ಕೆ.ಬಿ. ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು(ಜ.11): ಮೈಕ್ರೋಫೈನಾನ್ಸ್ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಬೋವಿ ಕಾಲೋನಿಯಲ್ಲಿ ನಡೆದಿದೆ. ಸಾದಿಕ್ ಬೇಗಂ (42) ಎಂಬುವರು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಸಾದಿಕ್ ಬೇಗಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಬಿ. ಕ್ರಾಸ್ ಕಲ್ಲುಶೆಟ್ಟಹಳ್ಳಿ ಬಳಿ ಮಹಿಳೆಯ ಶವ ಪತ್ತೆಯಾಗಿದೆ. ಕೆ.ಬಿ. ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.